Karnataka ByPolls Result: ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ NDAಗೆ ಮುನ್ನಡೆ!

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಕದನ ಕುತೂಹಲಕ್ಕೆ ಇಂದು ಅಂತಿಮ ತೆರೆ ಬೀಳಲಿದ್ದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಮುನ್ನಡೆ ಸಾಧಿಸಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ಮುನ್ನಡೆ ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






