Karnataka Rain: ಇಂದಿನಿಂದ ಮುಂಗಾರು ಜೋರು, ಗಾಳಿ ಸಹಿತ ಭಾರೀ ಮಳೆ..! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಜೂನ್ 9, 2025 - 12:04
 0  15
Karnataka Rain: ಇಂದಿನಿಂದ ಮುಂಗಾರು ಜೋರು, ಗಾಳಿ ಸಹಿತ ಭಾರೀ ಮಳೆ..! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಮಳೆಯಬ್ಬರಕ್ಕೆ ಜನ ತತ್ತರಿಸಿದ್ದಾರೆ. ಬೆಂಗಳೂರಿನಲ್ಲಿ ಮಳೆ ನಿಂತ್ರೂ ಸಮಸ್ಯೆ ಮುಗಿದಿಲ್ಲ. ಇತ್ತ ಕರಾವಳಿಯಲ್ಲಿ ವರುಣನ ಆರ್ಭಟಕ್ಕೆ ಜನಜೀವನವೇ ಅಸ್ತವ್ಯಸ್ತವಾಗಿದೆ. ನಡುವೆ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ಕೊಟ್ಟಿದೆ.

ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ(Rain) ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13 ಬಳಿಕ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ,

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು ಮೂರು ದಿನಗಳ ಬಳಿಕ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರದಲ್ಲಿ ಬುಧವಾರದಿಂದ ಮಳೆ ಹೆಚ್ಚಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕದ್ರಾ, ಕಾರ್ಕಳ, ಗದಗ, ಭಾಲ್ಕಿ, ಹುಮ್ನಾಬಾದ್, ಗುರುಮಿಟ್ಕಲ್, ಚಿಕ್ಕೋಡಿ, ರಾಯಚೂರು, ಮಂಗಳೂರು, ಗೇರುಸೊಪ್ಪದಲ್ಲಿ ಮಳೆಯಾಗಿದೆ. ಎಚ್​​ಎಎಲ್​​ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow