Karnataka Rains : ಬೆಂಗಳೂರು ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ವರುಣನ ಆರ್ಭಟವಾಗಲಿದೆ. ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು.
ಮಳೆ ಬರುವ ಸಾಧ್ಯತೆಯಿರುವ ಜಿಲ್ಲೆಗಳು:
ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಕೊಡಗು, ಯಾದಗಿರಿ, ಕಲಬುರಗಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಚಿಕ್ಕಮಗಳೂರು.
ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಾಗಿ ಒಣ ಹವೆಯೇ ಮುಂದುವರಿಯಲಿದೆ. ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣವಿರಬಹುದು.
ಬೆಂಗಳೂರು ನಗರದಲ್ಲಿ ಇಂದು ಸಾಧಾರಣ ಮಳೆಯ ನಿರೀಕ್ಷೆ ಇದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 13 ರಿಂದ 15 ಕಿ.ಮೀ.ರಷ್ಟು ಇರಬಹುದು.
ಮಳೆಯಾಗುವ ಜಿಲ್ಲೆಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಪ್ರವಾಸಕ್ಕೆ ಅಥವಾ ಹೊರಗೆ ಓಡಾಟಕ್ಕೆ ಪ್ಲಾನ್ ಮಾಡಿಕೊಂಡಿರುವವರು ಸ್ಥಳೀಯ ಹವಾಮಾನ ಮಾಹಿತಿ ಪರಿಶೀಲಿಸಿ ಮುಂದೆ ಸಾಗಬೇಕೆಂದು ಸೂಚಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?