Karnataka Rain: ನಾಳೆ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಅಬ್ಬರ! ಕರಾವಳಿಯಲ್ಲಿಲೂ ಅಲರ್ಟ್
ಬೆಂಗಳೂರು: ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ನಾಳೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ಬಳಿಕ ಗಾಳಿ ಸಹಿತ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷವಾಗಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತದ ಸಾಧ್ಯತೆ ಇದೆ ಎಂದು ಸೂಚಿಸಲಾಗಿದೆ.
ರಾಮನಗರ, ಚಾಮರಾಜನಗರ, ಕೋಲಾರ, ಹಾಸನ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ 5 ಮಿ.ಮೀ.ಯಿಂದ 30 ಮಿ.ಮೀ.ವರೆಗೆ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ ಹಾಗೂ ಗದಗ ಭಾಗದಲ್ಲೂ ಸಣ್ಣ ಪ್ರಮಾಣದ ಮಳೆ ಸಂಭವಿಸಲಿದೆ. ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಸಹ ಮಳೆಯ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಮುಂದಿನ 2–3 ದಿನಗಳವರೆಗೆ ಮಳೆಯ ವಾತಾವರಣ ನಿರೀಕ್ಷಿಸಲಾಗಿದೆ. ನಾಳೆ ಬೆಳಿಗ್ಗೆ ಕೆಲವೊಮ್ಮೆ ಬಿಸಿಲು ಕಾಣಿಸಬಹುದು, ಆದರೆ ಮಧ್ಯಾಹ್ನ 2 ಗಂಟೆ ನಂತರ ಅಥವಾ ಸಂಜೆ ಹೊತ್ತಿಗೆ ಗುಡುಗು-ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ.
ನಿಮ್ಮ ಪ್ರತಿಕ್ರಿಯೆ ಏನು?