Karnataka Weather: ಇಂದು ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಆರ್ಭಟಿಸಲಿದೆ ಮಳೆ!

ಅಕ್ಟೋಬರ್ 17, 2025 - 10:41
 0  20
Karnataka Weather: ಇಂದು ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಆರ್ಭಟಿಸಲಿದೆ ಮಳೆ!

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನು ಒಳಗೊಂಡಂತೆ ರಾಜ್ಯದ ಸುಮಾರು 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಸಹ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗಬಹುದು. ಆದರೆ ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೊಂದು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿ ಬಳ್ಳಾರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow