Karnataka weather: ನಾಳೆ ಭಾರಿ ಮಳೆ ಎಚ್ಚರಿಕೆ! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಕೆಲವೆಡೆ ಮೋಡಕವಿದ ವಾತಾವರಣವಿದೆ, ಇನ್ನೂ ಕೆಲವೆಡೆ ಚಳಿ ಇದೆ, ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಾಳೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ.
ವಿಜಯಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






