Keerthy Suresh: ಮನೆಯವರು ನೋಡಿರೋ ಹುಡುಗನ ಜೊತೆ ಕೀರ್ತಿ ಸುರೇಶ್ ಮದುವೆ ಫಿಕ್ಸ್.!?‌

ನವೆಂಬರ್ 20, 2024 - 13:33
 0  12
Keerthy Suresh: ಮನೆಯವರು ನೋಡಿರೋ ಹುಡುಗನ ಜೊತೆ ಕೀರ್ತಿ ಸುರೇಶ್ ಮದುವೆ ಫಿಕ್ಸ್.!?‌

ದಕ್ಷಿಣ ಭಾರತದ ಬಹುಬೇಡಿಕೆಯ 'ಮಹಾನಟಿ' ಕೀರ್ತಿ ಸುರೇಶ್ ಅವರ ಮದುವೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅವರು ಉದ್ಯಮಿಯೋರ್ವರನ್ನು ಮದುವೆಯಾಗಲಿದ್ದಾರೆ ಎನ್ನಲಾಗಿತ್ತು, ಬಿಜೆಪಿ ಸೇರಲಿದ್ದಾರೆ ಎಂದು ಕೂಡ ಹೇಳಲಾಗಿತ್ತು.

ಯುವ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದ್ರ ಅವರನ್ನು ಕೀರ್ತಿ ಕೈಹಿಡಿಯಲಿದ್ದಾರೆ ಎಂದು ಕೂಡ ಹೇಳಲಾಗಿತ್ತು.  ಇದೀಗ ಕೀರ್ತಿ ಸುರೇಶ್ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನಟಿಯ ಮದುವೆ ಮ್ಯಾಟರ್ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

ಮೂಲಗಳ ಪ್ರಕಾರ, ಕುಟುಂಬಸ್ಥರು ನೋಡಿದ ಹುಡುಗನ ಜೊತೆ ಕೀರ್ತಿ ಮದುವೆಯಾಗಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಇದೇ ಡಿಸೆಂಬರ್‌ನಲ್ಲಿ ಗೋವಾದಲ್ಲಿ ಕೀರ್ತಿ ಸುರೇಶ್ ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ವರ ಕೂಡ ನಟಿಯ ಸಂಬಂಧಿ ಎಂದು ಹೇಳಲಾಗುತ್ತಿದೆ. ಇದು ವಿಚಾರ ಅದೆಷ್ಟರ ಮಟ್ಟಿಗೆ ನಿಜ ಎಂಬುದನ್ನು ಕಾದುನೋಡಬೇಕಿದೆ.

ಕೀರ್ತಿ ಸುರೇಶ್ ಅವರ ಹೆಸರು ಅನೇಕರೊಂದಿಗೆ ತಳುಕು ಹಾಕಿಕೊಂಡಿದೆ. ಈ ಹಿಂದೆ ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ್ ಜೊತೆ ಕೂಡ ತಳುಕು ಹಾಕಿಕೊಂಡಿತ್ತು. ಆ ನಂತರ ನಟಿ ಇದು ಸುಳ್ಳು ಸುದ್ದಿ. ನಾವಿಬ್ಬರೂ ಫ್ರೆಂಡ್ಸ್ ಎಂದು ಪ್ರತಿಕ್ರಿಯೆ ನೀಡಿದರು. ಹಾಗಾಗಿ ಈ ಬಾರಿ ಹರಿದಾಡುತ್ತಿರುವ ಮದುವೆ ವಿಚಾರಕ್ಕೆ ನಟಿ ಏನು ಹೇಳ್ತಾರೋ? ಕಾಯಬೇಕಿದೆ. ಇನ್ನೂ `ಬೇಬಿ ಜಾನ್’ ಸಿನಿಮಾ ಮೂಲಕ ನಟಿ ಕೀರ್ತಿ ಸುರೇಶ್ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ.

ದಕ್ಷಿಣದ ಚಿತ್ರಗಳಲ್ಲಿ ಮಿಂಚುತ್ತಿರುವ ತಾರೆ ಕೀರ್ತಿ ಸುರೇಶ್. 'ಮಹಾನಟಿ' ಸಿನಿಮಾ ಮೂಲಕ ರಾಷ್ಟ್ರ ಪಶಸ್ತಿ ಮುಡಿಗೇರಿಸಿಕೊಂಡ ಕೀರ್ತಿ ಸದ್ಯಕ್ಕೆ ಹೀರೋಯಿನ್ ಓರಿಯಂಟೆಡ್ ಸಿನಿಮಾಗಳ ಕಡೆಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಖ್ಯಾತ ನಿರ್ಮಾಪಕ ಮತ್ತು ನಟ ಸುರೇಶ್ – ನಟಿ ಮೇನಕಾ ದಂಪತಿಗಳ ಕಿರಿಯ ಮಗಳು ಕೀರ್ತಿ ಸುರೇಶ್. ಮಲಯಾಳಂ ಚಿತ್ರರಂಗದಲ್ಲಿ ಬಾಲನಟಿಯಾಗಿ ಪಾದಾರ್ಪಣೆ ಮಾಡಿದ ಅವರು ಕಡಿಮೆ ಅವಧಿಯಲ್ಲಿಯೇ ಸ್ಟಾರ್ ನಟಿಯಾದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow