Kichcha Sudeep: ನಟ ಸುದೀಪ್ ತಾಯಿ ಸರೋಜಾ ವಿಧಿವಶ!

ಬೆಂಗಳೂರು:- ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ತಾಯಿ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಮೃತಪಟ್ಟಿದ್ದಾರೆ.
ತಾಯಿ ಮೃತದೇಹವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಸುದೀಪ್ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಅಭಿನಯ ಚಕ್ರವರ್ತಿ ಸುದೀಪ್ ಮನೆಯಲ್ಲಿ ಶೋಕದ ವಾತವರಣ ಮನೆ ಮಾಡಿದ್ದು, ತಾಯಿ ಕಳೆದುಕೊಂಡ ನೋವಲ್ಲಿ ಕಿಚ್ಚ ಸುದೀಪ್ ಇದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






