Lawyer Jagadish: 3 ತಿಂಗಳ ಬಳಿಕ ಲಾಯರ್ ಜಗದೀಶ್ ಜೈಲಿನಿಂದ ರಿಲೀಸ್..!

ಬಿಗ್ ಬಾಸ್ ಕನ್ನಡ ಸೀಸನ್ 11 ಶೋನ ಸ್ಪರ್ಧಿ ಜಗದೀಶ್ ಅವರು ಜೈಲಿನಿಂದ ರಿಲೀಸ್ ಆಗಿದ್ದಾರೆ. ಜನವರಿ 24ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಬಂಧನವಾದ ದಿನ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅನ್ನು ಸಹ ಹಂಚಿಕೊಂಡಿದ್ದರು. ಇದೀಗ 93 ದಿನಗಳ ಬಳಿಕ ಅವರು ಜೈಲಿಂದ ಹೊರಬಂದಿದ್ದಾರೆ.
ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗದೀಶ್, ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ, ನಾನು, PSI ಹಗರಣವನ್ನು ಬಯಲು ಮಾಡಿದ್ದು , ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ಟೀಂ, ದೊಡ್ಡ ರಾಜಕಾರಣಿಗಳ ಸೆಕ್ಸ್ ಸ್ಕ್ಯಾಂಡನ್ನು ಬಹಿರಂಗಪಡಿಸಿದ್ದು , ರವಿ ಚೆನ್ನಣ್ಣನವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು , ಟ್ರಾಫಿಕ್ ಟೋವಿಂಗ್ ಸಿಸ್ಟಂ ಅನ್ನು ನಿಲ್ಲಿಸಿದ್ದು , ಕೊಡಿಗೇಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ಧು , ಇವೆಲ್ಲವೂ ನನ್ನ ಹೋರಾಟದ ಭಾಗ’ ಎಂದಿದ್ದಾರೆ ಜಗದೀಶ್.
‘ಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆ, ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, 25/01/2025 ರಂದು ಸ್ಥಳಿಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ, ನಾನು ಶರಣಾಗುವುದಿಲ್ಲ’ ಎಂದು ಜಗದೀಶ್ ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






