Lokayukta Raid: ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡಗೆ ಲೋಕಾಯಕ್ತ ಶಾಕ್! ಮನೆ ಮೇಲೆ ದಾಳಿ
ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆ ಮೇರೆಗೆ ರಾಜೇಗೌಡ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅದರ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಪ್ರಕರಣದಲ್ಲಿ ಶಾಸಕರ ಪತ್ನಿ ಪುಷ್ಪ ಹಾಗೂ ಮಗನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಬಿಜೆಪಿ ಮುಖಂಡ ದಿನೇಶ್ ಹೊಸೂರು ಅವರು ರಾಜೇಗೌಡ ವಿರುದ್ಧ ದೂರು ದಾಖಲಿಸಿದ್ದರು. ಟಿ.ಡಿ. ರಾಜೇಗೌಡ ಈಗಾಗಲೇ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್ನಲ್ಲಿ ಆಸ್ತಿಗಳನ್ನು ಸರಿಯಾಗಿ ಘೋಷಿಸದ ಹಿನ್ನೆಲೆಯಲ್ಲಿ ಈ ದೂರು ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
FIR ದಾಖಲಾದ ಬೆನ್ನಲ್ಲೇ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲು ಬಸಾಪುರದ ರಾಜೇಗೌಡರ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದಲ್ಲಿ ರಾಜೇಗೌಡರ ಮನೆಯಿದೆ.
ನಿಮ್ಮ ಪ್ರತಿಕ್ರಿಯೆ ಏನು?