Lokayukta Raid: ರಾಜ್ಯದ ವಿವಿಧೆಡೆ ಮೆಗಾ ದಾಳಿ: ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್!

ಬೆಂಗಳೂರು: ಇಂದು ರಾಜ್ಯದಲ್ಲಿ ಲೋಕಾಯುಕ್ತ ಮೆಗಾ ದಾಳಿ ನಡೆದಿದೆ. ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಗದಗ ಸೇರಿದಂತೆ ಕರ್ನಾಟಕದ ವಿವಿಧೆಡೆ 8 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ದಾಖಲೆಗಳು, ಕಡತಗಳ ಪರಿಶೀಲನೆ ಮುಂದುವರಿದಿದೆ.
ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ ದಾಳಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ಅಲ್ಲದೆ, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು ಮನೆ ಮೇಲೆಯೂ ದಾಳಿ ನಡೆದಿದೆ.
ನಿಮ್ಮ ಪ್ರತಿಕ್ರಿಯೆ ಏನು?






