Lokayukta Raid: ಬೆಳ್ಳಂ ಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಶಾಕ್: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರೇಡ್

ಬೆಂಗಳೂರು: ಬೆಳ್ಳಂ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮುಂಜಾನೆಗೆ ರೇಡ್ ಮಾಡುವ ಮೂಲಕ ಭ್ರಷ್ಟರ ನಿದ್ದೆಗೆಡಿಸಿದ್ದಾರೆ.
ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಆ ಮೂಲಕ ಶಾಕ್ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಸದ್ಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ. ಬೆಂಗಳೂರಿನಲ್ಲಿ ಐಎಎಸ್ ಸೇರಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾ ದಾಳಿ ಮಾಡಿದೆ.
ಆರ್.ಟಿ.ನಗರದಲ್ಲಿರುವ ಹಿರಿಯ IAS ಅಧಿಕಾರಿ ವಾಸಂತಿ ಅಮರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಆರೋಪ ಕೇಳಿಬಂದಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ ಇವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






