Lokayukta Raid: ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಬಿಗ್ ಶಾಕ್! ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಮೇ 15, 2025 - 10:53
 0  11
Lokayukta Raid: ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಬಿಗ್ ಶಾಕ್! ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಇಳಿದಿದ್ದಾರೆ. ಬೆಂಗಳೂರಿನ 12, ತುಕೂರಿನ 7, ಬೆಂಗಳೂರು ಗ್ರಾಮಾಂತರದ 8, ಯಾದಗಿರಿ 5, ಮಂಗಳೂರಿನ 4, ಮತ್ತು ವಿಜಯಪುರದ 4 ಕಡೆ ಲೋಕಾಯುಕ್ತ ದಾಳಿ ಮಾಡಿದೆ. ರಾಜ್ಯಾದ್ಯಂತ ಒಟ್ಟು ಏಳು ಕಡೆ ಲೋಕಾಯುಕ್ತ ದಾಳಿ ನಡೆದಿದ್ದು,

ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್​​ ಉಮಾಕಾಂತ ಹಳ್ಳೆ ಮನೆಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಇತ್ತ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್​​ ಕಚೇರಿ ಮೇಲೂ ದಾಳಿ ಮಾಡಲಾಗಿದೆ.

ತುಮಕೂರಿನಲ್ಲಿ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ನಿರ್ಮಿತಿ ಕೇಂದ್ರದ ಎಂಡಿ ರಾಜಶೇಖರ ಮತ್ತು ಅವರ ಸಹೋದರನ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ.

ಇನ್ನು ವಿಜಯಪುರ ‌ನಗರದ ಸೆಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಎಸ್​​ಪಿ ಟಿ. ಮಲ್ಲೇಶ್​ ಹಾಗೂ‌ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಅತ್ತ ಸೊಲ್ಲಾಪುರ ನಗರದ ಕೆಹೆಚ್​​ಬಿ ಪ್ರದೇಶದಲ್ಲಿರುವ ನಿವಾಸದ ಮೇಲೂ ಡಿವೈಎಸ್​​ಪಿ ಸುರೇಶ ರೆಡ್ಡಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೋದನಹೊಸಹಳ್ಳಿಯಲ್ಲಿರುವ ಎಸ್​ಡಿಎ ಅನಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ದೇವನಹಳ್ಳಿ ಹಾಗೂ ಹೊಸಕೋಟೆಯಲ್ಲಿ ಭೂ‌ ಮಂಜೂರಾತಿ ವಿಭಾಗದಲ್ಲಿ ಕೆಲಸ ಮಾಡಿದ್ದ ಅನಂತ್, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾ ದಾಳಿ ಮಾಡಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow