Mahakumbh Stampede: ಕಾಲ್ತುಳಿತಕ್ಕೆ ಬಲಿಯಾದವರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಣೆ..!

ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಇಂದು ಕಾಲ್ತುಳಿತ ಉಂಟಾಗಿದೆ. ಪ್ರಯಾಗ್ರಾಜ್ನಲ್ಲಿ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ, 60 ಭಕ್ತರು ಗಾಯಗೊಂಡಿದ್ದಾರೆ. 25 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. ಮೃತರಾದವರಲ್ಲಿ ಕರ್ನಾಟಕದ ನಾಲ್ವರು ಭಕ್ತರು ಕೂಡ ಸೇರಿದ್ದಾರೆ.
ಇನ್ನೂ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.
ಹೌದು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಿಎಂ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ದುರಂತ ಘಟನೆಯ ಬಗ್ಗೆ ತನಿಖೆಗಾಗಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30ರಂದು ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ. ಮಹಾಕುಂಭ ಮೇಳದಲ್ಲಿ 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಜನರು ಸಾವನ್ನಪ್ಪಿದ್ದಾರೆ ಎಂದು ಸಿಎಂ ಆದಿತ್ಯನಾಥ್ ಹೇಳಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ 36 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಹಾಕುಂಭ ಕಾಲ್ತುಳಿತ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಾಗುವುದು. ತನಿಖೆ ನಡೆಸಿ ವರದಿ ನೀಡುವಂತೆ ಆಯೋಗಕ್ಕೆ ಹೇಳಿದ್ದೇವೆ. ಕಾಲಮಿತಿಯೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ನ್ಯಾಯಮೂರ್ತಿ ಹರ್ಷ ಕುಮಾರ್, ಮಾಜಿ ಪೊಲೀಸ್ ಮಹಾ ನಿರ್ದೇಶಕರಾದ ವಿ.ಕೆ ಗುಪ್ತಾ, ನಿವೃತ್ತ ಮೂವರು ಸದಸ್ಯರನ್ನೊಳಗೊಂಡ ಆಯೋಗ ರಚನೆ ಮಾಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






