Mahesh Shetty Timarodi: ಸದ್ಯಕ್ಕಿಲ್ಲ ಗಡಿಪಾರು: ಮಹೇಶ್‌ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್‌

ಅಕ್ಟೋಬರ್ 13, 2025 - 18:03
 0  11
Mahesh Shetty Timarodi: ಸದ್ಯಕ್ಕಿಲ್ಲ ಗಡಿಪಾರು: ಮಹೇಶ್‌ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್‌

ಬೆಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಮುಖಂಡ ಮತ್ತು ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್  ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಪೂರ್ಣಗೊಳಸಿದ್ದು, ಆದೇಶ ಕಾಯ್ದಿರಿಸಿದೆ. ಆದ್ರೆ, ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಬೇಡ. ಗಡಿಪಾರು ಜಾರಿಗೊಳಿಸದಂತೆ ಮಹತ್ವದ ಸೂಚನೆ ನೀಡಿದೆ.

ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು  ಮಂಗಳೂರಿನಿಂದ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು.

ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷಗಳ ಕಾಲ ಅವರನ್ನು ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿತ್ತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow