Mallikarjun Kharge: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಸ್ಪತ್ರೆಗೆ ದಾಖಲು!

ಅಕ್ಟೋಬರ್ 1, 2025 - 11:07
 0  12
Mallikarjun Kharge: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಹಾರ ಚುನಾವಣೆ ಹಾಗೂ ಸರಣಿ ಪ್ರವಾಸಗಳಿಂದಾಗಿ ಉಸಿರಾಟದ ತೊಂದರೆ ಕಂಡುಬಂದಿದ್ದು, ಸಾಮಾನ್ಯ ಆರೋಗ್ಯ ಪರಿಶೀಲನೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಿನ್ನೆ ಜನರಲ್ ಚೆಕಪ್​​ಗಾಗಿ ಆಸ್ಪತ್ರೆಗೆ ಮಲ್ಲಿಕಾರ್ಜುನ ಖರ್ಗೆ ದಾಖಲಾಗಿದ್ರು. ಖರ್ಗೆ ಅವರಿಗೆ ನಿತ್ಯದ ಚೆಕಪ್ ನಡೆಸಿರುವ ರಾಮಯ್ಯ ಆಸ್ಪತ್ರೆ ವೈದ್ಯರು. ಇಸಿಜಿ ಪರೀಕ್ಷೆ ಕೂಡ ಮಾಡಿದ್ದು, ನಿನ್ನೆ ರಾತ್ರಿಯಿಂದ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow