Manish Pandey: ಚಹಲ್-ಧನಶ್ರೀ ಬಳಿಕ ಮತ್ತೋರ್ವ ಸ್ಟಾರ್ ಕ್ರಿಕೆಟಿಗನ ದಾಂಪತ್ಯದಲ್ಲಿ ಬಿರುಕು..!

ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ಕೂಡಾ ಸದ್ಯದಲ್ಲೇ ಡಿವೋರ್ಸ್ ಪಡೆದುಕೊಳ್ಳಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಇದೀಗ ಮತ್ತೊಬ್ಬ ಸ್ಟಾರ್ ಕ್ರಿಕೆಟರ್ ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿದೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.
ಹೌದು ಕರ್ನಾಟಕ ಮೂಲದ ಟೀಂ ಇಂಡಿಯಾ ಕ್ರಿಕೆಟಿಗ ಮನೀಶ್ ಪಾಂಡೆ ಹಾಗೂ ಆಶ್ರಿತಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ಇದು ಈ ಇಬ್ಬರು ತಮ್ಮ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನುವ ಗುಸು ಗುಸು ಸುದ್ದಿಗೆ ಮತ್ತೆ ಬಲ ಬರುವಂತೆ ಆಗಿದೆ.
ಯಾಕೆಂದರೆ ಮನೀಶ್ ಪಾಂಡೆ ಹಾಗೂ ಆಶ್ರಿತಾ ಶೆಟ್ಟಿ ಈ ಹಿಂದೆ ಹಲವು ಬಾರಿ ಸಾಕಷ್ಟು ಖುಷಿ ಖುಷಿಯಿಂದ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆದರೆ ಈ ಜೋಡಿ ಈಗ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿಕೊಂಡಿರುವುದು ಅವರ ಅಭಿಮಾನಿಗಳನ್ನು ಅಚ್ಚರಿಗೀಡಾಗುವಂತೆ ಮಾಡಿದೆ.
ಮನೀಶ್ ಪಾಂಡೆ, ಮಾಡೆಲ್ ಕಂ ನಟಿ ಆಶ್ರಿತಾ ಶೆಟ್ಟಿ ಅವರನ್ನು ಡಿಸೆಂಬರ್ 02, 2019ರಲ್ಲಿ ಮುಂಬೈನಲ್ಲಿ ಮದುವೆಯಾಗಿದ್ದರು. ವಿವಾಹವಾದ ಆರಂಭಿಕ ವರ್ಷಗಳಲ್ಲಿ ಮನೀಶ್ ಪಾಂಡೆ ಹಾಗೂ ಆಶ್ರಿತಾ ಶೆಟ್ಟಿ ಜತೆಜತೆಯಾಗಿಯೇ ಕಾಣಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿಗಿನ ವರ್ಷಗಳಲ್ಲಿ ಈ ಜೋಡಿ ಒಟ್ಟಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಆದರೆ ಈ ಬಗ್ಗೆ ಮನೀಶ್ ಪಾಂಡೆಯಾಗಲಿ ಅಥವಾ ಅಶ್ರಿತಾ ಶೆಟ್ಟಿಯಾಗಲಿ ಯಾವುದೇ ಅಧಿಕೃತ ಮಾಹಿತಿಯನ್ನು ತಿಳಿಸಿಲ್ಲ.
ನಿಮ್ಮ ಪ್ರತಿಕ್ರಿಯೆ ಏನು?






