Manu Bhaker: ಭಾರೀ ಏರಿಕೆ ಕಂಡ ಮನು ಭಾಕರ್ ಬ್ರ್ಯಾಂಡ್​ ಮೌಲ್ಯ.!

ಆಗಸ್ಟ್ 14, 2024 - 11:14
 0  14
Manu Bhaker: ಭಾರೀ ಏರಿಕೆ ಕಂಡ ಮನು ಭಾಕರ್ ಬ್ರ್ಯಾಂಡ್​ ಮೌಲ್ಯ.!
Focus Karnataka Manu Bhaker

ಪ್ಯಾರಿಸ್​ ಒಲಿಂಪಿಕ್ಸ್​ನ(Paris Olympics) ಶೂಟಿಂಗ್​ ವಿಭಾಗದಲ್ಲಿ ಅವಳಿ ಕಂಚಿನ ಪದಕ ಗೆದ್ದ ಮನು ಭಾಕರ್(Manu Bhaker)​ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ.

ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು. ಭಾರತ ತಂಡದ ಸ್ಟಾರ್​ ಕ್ರಿಕೆಟಿಗರು ಜಾಹೀರಾತು ಒಪ್ಪಂದಗಳಿಗೆ ವಾರ್ಷಿಕ 3 ರಿಂದ 6 ಕೋಟಿ ರೂ. ಪಡೆಯುತ್ತಾರೆ. ಬ್ಯಾಡ್ಮಿಂಟನ್​ ಆಟಗಾರ್ತಿ ಪಿ,ವಿ ಸಿಂಧು 2022ರಲ್ಲಿ 2.21 ಕೋಟಿ ರೂ. ಮೊತ್ತದ ಒಪ್ಪಂದ ಪಡೆದಿದ್ದೇ ಭಾರತದಲ್ಲಿ ಕ್ರಿಕೆಟಿಗರ ಹೊರತಾಗಿ ಇತರ ಕ್ರೀಡಾಪಟುಗಳು ಪಡೆದ ಇದುವರೆಗಿನ ಗರಿಷ್ಠ ಮೊತ್ತವಾಗಿದೆ. ಒಲಿಂಪಿಕ್ಸ್​ ಪದಕ ಗೆಲ್ಲುವ ಮೊದಲು ಮನು ಪ್ರತಿ ಒಪ್ಪಂದವನ್ನು 20-25 ಲಕ್ಷ ರೂ.ಗೆ ಮಾಡಿಕೊಳ್ಳುತ್ತಿದ್ದರು. ಸದ್ಯ ಮನು ಪಾಮ್ಯಾಕ್ಸ್​ ಆಕ್ಟಿವ್​ವೇರ್​ಗೆ ಮಾತ್ರ ಪ್ರಚಾರ ರಾಯಭಾರಿಯಾಗಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮನು ಭಾಕರ್​ ಅವರು 12 ಕಂಪನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದರು. ಪದಕ ಸಾಧನೆಯ ಬಳಿಕ ತನ್ನ ಚಿತ್ರಗಳನ್ನು ಬಳಸಿ, ತನಗೆ ಅಭಿನಂದನೆ ಸಲ್ಲಿಸುವ ಜಾಹೀರಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅನಧಿಕೃತವಾಗಿ ಪ್ರಕಟಿಸಿದ್ದು ಇದಕ್ಕೆ ಕಾರಣ. ಬ್ರ್ಯಾಂಡ್​​ಗಳು ತನಗೆ ಪ್ರಾಯೋಜಕತ್ವ ನೀಡಿರದಿದ್ದರೂ ಮತ್ತು ತನ್ನನ್ನು ಪ್ರಚಾರ ರಾಯಭಾರಿಯಾಗಿ ನೇಮಿಸಿಕೊಳ್ಳದಿದ್ದರೂ, ಇದೀಗ ತನ್ನ ಯಶಸ್ಸಿನಲ್ಲಿ ಪಾಲು ಪಡೆಯಲು ಮುಂದಾಗುವ ಮೂಲಕ ಉಚಿತ ಮಾರ್ಕೆಟಿಂಗ್​ ಮಾಡಿವೆ ಎಂದು ಮನು ಅವರ ವ್ಯವಹಾರಗಳನ್ನು ನೋಡಿಕೊಳ್ಳುವ ತಂಡ ಆರೋಪಿಸಿ ಕಾನೂನು ನೋಟಿಸ್​ ಕಳುಹಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. 

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow