Mitchell Starc: ಟಿ20 ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಮಿಚೆಲ್‌ ಸ್ಟಾರ್ಕ್..! ಕಾರಣವೇನು..? 

ಸೆಪ್ಟೆಂಬರ್ 2, 2025 - 21:01
ಸೆಪ್ಟೆಂಬರ್ 2, 2025 - 17:23
 0  12
Mitchell Starc: ಟಿ20 ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಮಿಚೆಲ್‌ ಸ್ಟಾರ್ಕ್..! ಕಾರಣವೇನು..? 

ಆಸ್ಟ್ರೇಲಿಯಾದ ಅತ್ಯುತ್ತಮ ಬೌಲರ್‌ಗಳಲ್ಲಿ ಒಬ್ಬರಾದ ಮಿಚೆಲ್ ಸ್ಟಾರ್ಕ್, ಟಿ20 ಪಂದ್ಯಗಳಿಂದ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನತ್ತ ಹೆಚ್ಚಿನ ಗಮನ ಹರಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಸದ್ಯ ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದಾಗ್ಯೂ ಏಕದಿನ ಹಾಗೂ ಟೆಸ್ಟ್​ ಕ್ರಿಕೆಟ್​ನಲ್ಲಿ ಮುಂದುವರೆಯುವೆ. ನನ್ನ ಮೊದಲ ಆದ್ಯತೆ ಯಾವತ್ತಿದ್ದರೂ ಅದು ಟೆಸ್ಟ್ ಆಡುವುದು. ಹಾಗೆಯೇ 2027ರ ಏಕದಿನ ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಟಿ20 ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ ಎಂದು ಮಿಚೆಲ್ ಸ್ಟಾರ್ ತಿಳಿಸಿದ್ದಾರೆ.

ಮಿಚೆಲ್ ಸ್ಟಾರ್ಕ್​ ಆಸ್ಟ್ರೇಲಿಯಾ ಪರ 65 ಟಿ20 ಪಂದ್ಯಗಳನ್ನಾಡಿದ್ದಾರೆ. ಅದರಲ್ಲೂ 2021 ರಲ್ಲಿ ಚೊಚ್ಚಲ ಬಾರಿ ಟಿ20 ವಿಶ್ವಕಪ್ ಗೆದ್ದುಕೊಡುವಲ್ಲಿ ಸ್ಟಾರ್ಕ್​ ಪ್ರಮುಖ ಪಾತ್ರವಹಿಸಿದ್ದರು. ಇದೀಗ 13 ವರ್ಷಗಳ ಟಿ20 ಕೆರಿಯರ್​ಗೆ ಗುಡ್ ಬೈ ಹೇಳಲು ಎಡಗೈ ವೇಗಿ ನಿರ್ಧರಿಸಿದ್ದಾರೆ.

ಆಸ್ಟ್ರೇಲಿಯಾ ಪರ 65 ಟಿ20 ಪಂದ್ಯಗಳನ್ನಾಡಿರುವ ಮಿಚೆಲ್ ಸ್ಟಾರ್ಕ್ 1458 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 1881 ರನ್​ಗಳನ್ನು ನೀಡಿರುವ ಅವರು ಒಟ್ಟು 79 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಚುಟುಕು ಕ್ರಿಕೆಟ್​ಗೆ ವಿದಾಯ ಹೇಳಿರುವ ಮಿಚೆಲ್ ಸ್ಟಾರ್ಕ್ ಮುಂಬರುವ ದಿನಗಳಲ್ಲಿ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಅವರು ಐಪಿಎಲ್ ಸೇರಿದಂತೆ ವಿಶ್ವದ ಪ್ರಮುಖ ಟಿ20 ಲೀಗ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow