MLA Munirathna: ಶಾಸಕ ಮುನಿರತ್ನ ತಲೆಗೆ ಮೊಟ್ಟೆ ಹೊಡೆದ ಕಾಂಗ್ರೆಸ್ ಕಾರ್ಯಕರ್ತರು!

ಡಿಸೆಂಬರ್ 25, 2024 - 13:59
 0  19
MLA Munirathna: ಶಾಸಕ ಮುನಿರತ್ನ ತಲೆಗೆ ಮೊಟ್ಟೆ ಹೊಡೆದ ಕಾಂಗ್ರೆಸ್ ಕಾರ್ಯಕರ್ತರು!

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಆರ್. ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಘಟನೆ ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ನಡೆದಿದೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. 

ಮೊಟ್ಟೆ ಹೊಡೆದ ಬಳಿಕ ಶಾಸಕ ಮುನಿರತ್ನ ಅಲ್ಲಿಂದ ತೆರಳಿದ್ದು, ನಂತರ ಮುನಿರತ್ನ ಬೆಂಬಲಿಗರು ಹಾಗೂ ಕೈ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಲಗ್ಗೆರೆ ಸಮೀಪದ ಲಕ್ಷ್ಮಿದೇವಿನಗರದಲ್ಲಿ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಾರೆ.

ಘಟನೆ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮತ್ತು ಮಾರಾಮಾರಿ ನಡೆದಿದೆ ಎನ್ನಲಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಅವರು ಕಾರ್ಯಕ್ರಮಕ್ಕೆ ಬಂದ ಕೂಡಲೇ ಅವರ ಕಾರಿನತ್ತ ಮೊಟ್ಟೆ ಎಸೆದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ‌ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow