MLA Vinay Kulkarni: ವಿನಯ್ ಕುಲಕರ್ಣಿ ಅತ್ಯಾಚಾರ ಪ್ರಕರಣ ಸಿಐಡಿ ತನಿಖೆಗೆ!

ಬೆಂಗಳೂರು: ಕಾಂಗ್ರೆಸ್ನ ಪ್ರಭಾವಿ ನಾಯಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಶಾಸಕ ವಿನಯ ಕುಲಕರ್ಣಿ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದಕ್ಕೆ ಪ್ರತಿಯಾಗಿ ಶಾಸಕರು ಮಹಿಳೆಯ ವಿರುದ್ದ ದೂರು ನೀಡಿದ್ದರು. ಇದೀಗ ಈ ಎರಡು ಪ್ರಕರಣದ ತನಿಖೆಯ ಹೊಣೆ ಇದೀಗ ರಾಜ್ಯ ಸರ್ಕಾರ ಸಿಐಡಿಗೆ ನೀಡಿದೆ.
ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಶಾಸಕ ವಿನಯ್ ಕುಲಕರ್ಣಿ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ. ರೈತ ಹೋರಾಟ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದ ನನಗೆ, 2022 ರಲ್ಲಿ ವಿನಯ ಕುಲಕರ್ಣಿ ಪರಿಚಯವಾಗಿತ್ತು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರು.
ಅಲ್ಲದೆ ಭೇಟಿಯ ಸಂದರ್ಭದಲ್ಲಿ ನನ್ನ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡಿದ್ದ ಶಾಸಕರನ್ನು ಮೊದಲ ಬಾರಿ ಹೆಬ್ಬಾಳ ನಿವಾಸದಲ್ಲಿ ಭೇಟಿ ಮಾಡಿದ್ದೆ. ನಂತರದಲ್ಲಿ ದೇವನಹಳ್ಳಿ ಮತ್ತು ಧರ್ಮಸ್ಥಳಕ್ಕೆ ಬಲವಂತದಿಂದ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದರು ಎಂದು ಮಹಿಳೆ ಆರೋಪ ಮಾಡಿದ್ದಾರೆ.
ಇದಕ್ಕೆ ಪ್ರತಿಯಾಗಿ ಮಹಿಳೆಯ ವಿರುದ್ಧ ವಿನಯ್ ಕುಲಕರ್ಣಿ ಕೂಡಾ ದೂರು ನೀಡಿದ್ದಾರೆ. ಮಹಿಳೆ ತನ್ನಲ್ಲಿರುವ ಆಡಿಯೋ ವಿಡಿಯೋವನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿ 2 ಕೋಟಿ ಸುಲಿಗೆಗೆ ಮುಂದಾಗಿದ್ದರು ಎಂದು ಆರೋಪ ಮಾಡಿದ್ದಾರೆ. ಈ ಸಂಬಂಧ ದೂರನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಖಾಸಗಿ ವಾಹಿನಿಯ ಮುಖ್ಯಸ್ಥರ ವಿರುದ್ಧ ಸುಲಿಗೆ ಪ್ರಕರಣದ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಜಯ್ ಕುಲಕರ್ಣಿ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿದೆ. ಸಿಐಡಿ ತನಿಖೆಯಿಂದಲೇ ಸತ್ಯಾಸತ್ಯತೆ ಹೊರಬರಲಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






