Montha Cyclone: ಕರ್ನಾಟಕ ಕರಾವಳಿಗೂ ತಟ್ಟಿದ ಮೊಂತಾ ಎಫೆಕ್ಟ್: ಕಡಲ ತೀರದಲ್ಲಿ ಅಲೆಗಳ ಅಬ್ಬರ

ಅಕ್ಟೋಬರ್ 28, 2025 - 12:00
 0  11
Montha Cyclone: ಕರ್ನಾಟಕ ಕರಾವಳಿಗೂ ತಟ್ಟಿದ ಮೊಂತಾ ಎಫೆಕ್ಟ್: ಕಡಲ ತೀರದಲ್ಲಿ ಅಲೆಗಳ ಅಬ್ಬರ

ಬೆಂಗಳೂರು: ಮೊಂತಾ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿಯಲ್ಲೂ ಅನುಭವವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ಬಿಟ್ಟುಬಿಟ್ಟು ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದೆ. ಮಂಗಳೂರಿನ ತಣ್ಣೀರುಬಾವಿ ಸಮುದ್ರ ತೀರದಲ್ಲಿ ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ.

ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗವೂ ಹೆಚ್ಚಾದ ಹಿನ್ನೆಲೆಯಲ್ಲಿ ಮೀನುಗಾರಿಕೆ ಇಲಾಖೆ ಎಚ್ಚರಿಕೆ ಪ್ರಕಟಿಸಿದೆ. ಮೀನುಗಾರರಿಗೆ ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದ್ದು, ಈಗಾಗಲೇ ತೆರಳಿದ್ದವರು ವಾಪಸ್ ಬರುವಂತೆ ಹೇಳಲಾಗಿದೆ. ಬಹುತೇಕ ದೋಣಿಗಳು ಬಂದರಿನಲ್ಲಿ ಲಂಗರು ಹಾಕಿದ್ದು, ಮೀನುಗಾರಿಕೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ನಾಡದೋಣಿ ಮೀನುಗಾರಿಕೆಗೂ ನಿರ್ಬಂಧ ವಿಧಿಸಲಾಗಿದ್ದು, ಯಾವುದೇ ಅವಘಡ ಸಂಭವಿಸದಂತೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow