Mrunal Thakur: ಅಟ್ಲಿ-ಅಲ್ಲು ಅರ್ಜುನ್ ಚಿತ್ರಕ್ಕೆ 'ಸೀತಾ ರಾಮಂ' ಬೆಡಗಿ ಮೃಣಾಲ್ ಫಿಕ್ಸ್!?

‘ಸೀತಾರಾಮಂ’ ಬೆಡಗಿ ಮೃಣಾಲ್ ಠಾಕೂರ್ ತೆಲುಗು- ಬಾಲಿವುಡ್ ಎರಡರಲ್ಲೂ ಉತ್ತಮ ಅವಕಾಶ ಬಾಚಿಕೊಳ್ತಿದ್ದಾರೆ. ಸದ್ಯ ಬಾಲಿವುಡ್‌ನ ಬಿಗ್ ಪ್ರಾಜೆಕ್ಟ್‌ವೊಂದರಲ್ಲಿ ಮೃಣಾಲ್ ಪಾಲಿಗೆ ದಕ್ಕಿದೆ. ಸ್ಟಾರ್ ನಟನ ಜೊತೆ ರೊಮ್ಯಾನ್ಸ್ ಮಾಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಇದರ ನಡುವೆ ಅಲ್ಲು ಅರ್ಜುನ್ ನಟನೆಯ ಹೊಸ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಈ ಬೆಳವಣಿಗೆ ಬಗ್ಗೆ ಚಿತ್ರತಂಡದಿಂದ ಇನ್ನೂ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಮೃಣಾಲ್ ಠಾಕೂರ್ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಇರುವುದರಿಂದ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿಕೊಂಡಿದ್ದರೆ ಅಚ್ಚರಿ ಏನಿಲ್ಲ. ಸದ್ಯ ಅವರು ಹಲವು ಪ್ರಾಜೆಕ್ಟ್ಗಳಲ್ಲಿ ಬ್ಯುಸಿ ಆಗಿದ್ದಾರೆ.
ಅಟ್ಲಿ-ಅಲ್ಲು ಅರ್ಜುನ್ ಕಾಂಬಿನೇಷನ್ನ ಸಿನಿಮಾ ಬಗ್ಗೆ ಇನ್ನೊಂದು ಇಂಟರೆಸ್ಟಿಂಗ್ ಗಾಸಿಪ್ ಕೇಳಿಬಂದಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ತ್ರಿಬಲ್ ರೋಲ್ ಮಾಡಲಿದ್ದಾರೆ ಎನ್ನಲಾಗಿದೆ. ತಂದೆ ಹಾಗೂ ಇಬ್ಬರು ಮಕ್ಕಳ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಅದ್ದೂರಿ ಬಜೆಟ್ನಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಮುಂಬೈ ಮತ್ತು ಚೆನ್ನೈನಲ್ಲಿ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಕೆಲವೇ ದಿನಗಳ ಹಿಂದೆ ಮುಂಬೈನಲ್ಲಿ ಅಲ್ಲು ಅರ್ಜುನ್ ಅವರ ಲುಕ್ ಟೆಸ್ಟ್ ಕೂಡ ಮಾಡಲಾಗಿದೆ. ‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?






