MS ಧೋನಿಗೆ ಸಂಕಷ್ಟ: ವಿವಾದದಲ್ಲಿ ಸಿಲುಕಿದೆ ಕೂಲ್ ಕ್ಯಾಪ್ಟನ್ ಐಶಾರಾಮಿ ಮನೆ!

ಟೀಮ್ ಇಂಡಿಯಾದ ಮಾಜಿ ಆಟಗಾರ MS ಧೋನಿಗೆ ಸಂಕಷ್ಟ ಎದುರಾಗಿದ್ದು, ಕೂಲ್ ಕ್ಯಾಪ್ಟನ್ ರ ಐಶಾರಾಮಿ ಮನೆ ಮತ್ತೆ ವಿವಾದದಲ್ಲಿ ಸಿಲುಕಿದೆ.
ಮಹೇಂದ್ರ ಸಿಂಗ್ ಧೋನಿ ಅವರ ಸಾಧನೆಯನ್ನು ಪರಿಗಣಿಸಿ ಜಾರ್ಖಂಡ್ ಸರ್ಕಾರ ಈ ಹಿಂದೆ ಅವರಿಗೆ ರಾಂಚಿಯಲ್ಲಿ 10 ಸಾವಿರ ಚದರ ಅಡಿ ಜಾಗ ನೀಡಿತ್ತು. ಜಾಗದಲ್ಲಿ ಮಹೇಂದ್ರ ಸಿಂಗ್ ಧೋನಿ ಐಷಾರಾಮಿ ಮನೆ ನಿರ್ಮಿಸಿದ್ದರು. ಇಷ್ಟೇ ಆಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ಆದರೆ ಈ ಮನೆಯನ್ನು ಧೋನಿ ವಾಣಿಜ್ಯ ಉದ್ದೇಶದ ಬಳಕೆಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ರಾಂಚಿಯ ಹರ್ಮು ರಸ್ತೆಯಲ್ಲಿರುವ ಧೋನಿಯ ಈ ಮನೆಯಲ್ಲಿ ಡಯಾಗ್ನೋಸ್ಟಿಕ್ ಸೆಂಟರ್ ನಿರ್ಮಿಸಲಾಗುತ್ತಿದೆ ಎಂದು ವರದಿಯಾಗಿದೆ. ಈ ಬಗ್ಗೆ ಹೌಸಿಂಗ್ ಬೋರ್ಡ್ಗೆ ದೂರು ದಾಖಲಿಸಲಾಗಿದೆ. ಹೀಗಾಗಿ ಇದೀಗ ಜಾರ್ಖಡ್ ಹೌಸಿಂಗ್ ಬೋರ್ಡ್ ಧೋನಿ ಕಡೆಯಿಂದ ಸ್ಪಷ್ಟನೆ ಕೇಳಿದೆ.
ಜಾರ್ಖಂಡ್ ಹೌಸಿಂಗ್ ಬೋರ್ಡ್ ನಿಯಮಗಳ ಪ್ರಕಾರ, ವಸತಿ ಪ್ಲಾಟ್‌ಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವಂತಿಲ್ಲ. ಯಾವುದೇ ಪ್ರಕರಣದಲ್ಲಿ ಯಾವುದೇ ಉಲ್ಲಂಘನೆ ಕಂಡುಬಂದರೆ ಅದನ್ನು ಕಾನೂನುಬಾಹಿರ ಎಂದು ಪರಿಗಣಿಸಲಾಗುತ್ತದೆ.
ಇದೀಗ ಈ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ನಿಯಮ ಉಲ್ಲಂಘನೆ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಜಾರ್ಖಂಡ್ ಹೌಸಿಂಗ್ ಬೋರ್ಡ್ನ ಅಧ್ಯಕ್ಷ ಸಂಜಯ್ ಲಾಲ್ ಪಾಸ್ವಾನ್ ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






