Muda scam: ಲೋಕಾಯುಕ್ತ ವಿಚಾರಣೆಗೆ ಹಾಜರಾದ CM ಸಿದ್ದರಾಮಯ್ಯ!

ನವೆಂಬರ್ 6, 2024 - 10:53
 0  11
Muda scam: ಲೋಕಾಯುಕ್ತ ವಿಚಾರಣೆಗೆ ಹಾಜರಾದ CM ಸಿದ್ದರಾಮಯ್ಯ!

 ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. ತಮ್ಮ ನಾಲ್ಕೂವರೆ ದಶಕಗಳ ಸುದೀರ್ಘ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಅಧಿಕಾರದಲ್ಲಿರುವ ಮುಖ್ಯಮಂತ್ರಿಯೊಬ್ಬರು ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತಿರುವುದೂ ಕೂಡ ರಾಜ್ಯದಲ್ಲಿ ಇದೇ ಮೊದಲಾಗಿದೆ.

ಮೈಸೂರು ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಅವರು ಕಾರು ಮೂಲಕ ಆಗಮಿಸಿದ್ದಾರೆ. ಬಳಿಕ ಮುಡಾ ಕೇಸ್​​ಗೆ ಸಂಬಂಧ ಪಟ್ಟಂತೆ ಲೋಕಾಯುಕ್ತ ಎಸ್​​ಪಿ ಉದೇಶ್ ಮುಂದೆ ಸಿಎಂ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಎ1 ಆರೋಪಿಯಾಗಿದ್ದು ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ಈ ನಡುವೆ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿರುವ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿ ಸುತ್ತಮುತ್ತ ನಗರ ಪೊಲೀಸರು ಬಿಗಿ ಭದ್ರತೆ ನಿಯೋಜಿಸಿದ್ದಾರೆ. ನಗರದ ಕೃಷ್ಣ ವಿಲಾಸ ರಸ್ತೆ ಮತ್ತು ದಿವಾನ್ಸ್ ರಸ್ತೆ ಜಂಕ್ಷನ್ ನಲ್ಲಿರುವ ಲೋಕಾಯುಕ್ತ ಕಚೇರಿ ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಲಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow