MUDA Scam: ಸಿದ್ದರಾಮಯ್ಯಗೆ ರಿಲೀಫ್: ಮುಡಾ ಕೇಸ್ʼನಲ್ಲಿ ಸಿಎಂ, ಪತ್ನಿಗೆ ಕ್ಲೀನ್ ಚಿಟ್!

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಾಗಿನಿಂದ ಮುಡಾ ಹಗರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ತನಿಖೆ ಆರಂಭವಾದಾಗಿನಿಂದ ದಿನಕ್ಕೊಂದು ಕರ್ಮಕಾಂಡ ಬಯಲಾಗುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ಕೊನೆಗೂ ಒಂದು ಹಂತಕ್ಕೆ ನಿರಾಳರಾಗುವಂತಾಗಿದೆ.
ಹೌದು ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಗಿದೆ. ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






