MUDA ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂಕೋರ್ಟ್!

ಜುಲೈ 21, 2025 - 14:07
 0  11
MUDA ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂಕೋರ್ಟ್!

ಬೆಂಗಳೂರು: MUDA ಹಗರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್‌ ಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್ ನೀಡಿದೆ. ಜಾರಿ ನಿರ್ದೇಶನಾಲಯ (ED) ನೀಡಿದ್ದ ನೋಟೀಸ್‌ ಗಳು ಅನ್ವಯಿಸದಂತೆ ಕೋರ್ಟ್ ಸ್ಪಷ್ಟನೆ ನೀಡಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಪಾರ್ವತಿ ಅವರಿಗೆ ನೀಡಿದ್ದ ನೋಟೀಸ್‌ ಅನ್ನು ರದ್ದುಗೊಳಿಸಿತ್ತು. ಅದನ್ನು ಪ್ರಶ್ನಿಸಿ ಇಡಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಆದರೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠ ಇಡಿಯ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದೆ.

ಹೌದು ಕರ್ನಾಟಕದ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್​​ಗೆ ಸಮನ್ಸ್ ನೀಡುವ ವಿಚಾರದಲ್ಲಿ ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್​ನಲ್ಲಿ ಭಾರಿ ಹಿನ್ನಡೆಯಾಗಿದೆ. ಇದರಿಂದ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ ನಿರಾಳರಾದಂತಾಗಿದೆ. ಇಡಿ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಅಷ್ಟಕ್ಕೇ ಸುಮ್ಮನಾಗದೆ ಸಂಸ್ಥೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ದಯವಿಟ್ಟು ನಾವು ಬಾಯಿ ತೆರೆಯುವಂತೆ ಮಾಡಬೇಡಿ. ಹಾಗೆ ಮಾಡಿದರೆ, ನಾವು ಇಡಿ ಬಗ್ಗೆ ಕೆಲವು ಕಟು ಟೀಕೆಗಳನ್ನು ಮಾಡಬೇಕಾಗಬಹುದು. ದುರದೃಷ್ಟವಶಾತ್, ನನಗೆ ಮಹಾರಾಷ್ಟ್ರದಲ್ಲಿ ಸ್ವಲ್ಪ ಅನುಭವವಿದೆ. ನೀವು ಈಗ ದೇಶಾದ್ಯಂತ ಈ ರೀತಿಯ ವರ್ತನೆ ಮುಂದುವರಿಸಬಾರದು. ರಾಜಕೀಯ ಪೈಪೋಟಿಯನ್ನು ಏನಿದ್ದರೂ ಮತದಾರರ ಎದುರು ಮಾಡಿಕೊಳ್ಳಲಿ. ಇಡಿಯನ್ನು ಏಕೆ ಎಂದು ಬಳಸಲಾಗುತ್ತಿದೆ’ ಎಂದು ಅಡಿಷನಲ್ ಸಾಲಿಸಿಟರ್ ಜನರಲ್ ಎಸ್​ವಿ ರಾಜಿ ಅವರನ್ನುದ್ದೇಶಿಸಿ ಸಿಜೆಐ ಬಿಆರ್ ಗವಾಯಿ ಪ್ರಶ್ನಿಸಿದರು.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow