Munirathna: ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ SIT ದಾಳಿ..!

ಬೆಂಗಳೂರು: ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮೊದಲು ಮುನಿರತ್ನ ಬಂಧನವಾಗಿತ್ತು. ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅದಾದ ಮರುದಿನವೇ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು.
ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ.
ಸದ್ಯ ಮೂರು ಕೇಸ್ಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್ಎಸ್ಎಲ್ ತಂಡದ ಜತೆಗೇ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






