Muthappa Rai: ರಿಕ್ಕಿ ಮೇಲೆ ದಾಳಿಯಾಗಿದ್ದು ಆಸ್ತಿ ವಿಚಾರಕ್ಕಾ..? ಹಾಗದ್ರೆ ಮುತ್ತಪ್ಪ ರೈ ಎಷ್ಟಿದೆ? ಇಲ್ಲಿದೆ ಮಾಹಿತಿ

ಎಪ್ರಿಲ್ 19, 2025 - 22:09
 0  11
Muthappa Rai: ರಿಕ್ಕಿ ಮೇಲೆ ದಾಳಿಯಾಗಿದ್ದು ಆಸ್ತಿ ವಿಚಾರಕ್ಕಾ..? ಹಾಗದ್ರೆ ಮುತ್ತಪ್ಪ ರೈ ಎಷ್ಟಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಗನ್ಮ್ಯಾನ್ಇಟ್ಕೊಂಡು ಓಡಾಡುವ ರಿಕ್ಕಿ ರೈ  ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ಬ್ಯುಸಿನೆಸ್ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಮಧ್ಯೆ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಇನ್ನೂ ಮುತ್ತಪ್ಪ ರೈ ಮೊದಲ ಪತ್ನಿ ರೇಖಾ ರೈ ಸಾವನ್ನಪ್ಪಿದ ನಂತರ ಅನುರಾಧ ರೈ ಅನ್ನೋರನ್ನ 2ನೇ ಮದುವೆ ಮಾಡಿಕೊಂಡಿದ್ರು. ಆದರೆ ಮುತ್ತಪ್ಪ ರೈಗೆ ಅನಾರೋಗ್ಯ ಸಮಸ್ಯೆ ಶುರುವಾಗ್ತಿದ್ದಂತೆ. ಆಸ್ತಿ ಸಂಬಂಧ ಗಲಾಟೆಗಳು ಶುರುವಾಗಿದ್ದವು.

ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧಾ ಪಾಲು ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.

ಈ ಹಿಂದೆಯೇ ಎರಡನೇ ಪತ್ನಿ ಅನುರಾಧಾಗೆ ಚಿನ್ನಾಭರಣ, ಕಾರು, ಕೋಟ್ಯಂತರ ರೂಪಾಯಿ ಹಣದ ಜೊತೆ ಹೆಚ್ ಡಿ ಕೋಟೆ ಆಸ್ತಿ, ಜೊತೆಗೆ ಸಹಕಾರ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿ ಕೊಡಲಾಗಿದೆ. ಅನುರಾಧಾ ಜೊತೆಗಿದ್ದ ಸಂದರ್ಭದಲ್ಲಿ ಅವರಿಗೆ ಸೇರಬೇಕಾದ ಆಸ್ತಿಯನ್ನು ನೀಡಲಾಗಿದೆ ಎಂದು ವಿಲ್‍ನಲ್ಲಿ ಉಲ್ಲೇಖವಾಗಿದೆ.

ಆಸ್ತಿ ಎಷ್ಟಿದೆ?
ವಿಲ್ ಪ್ರಕಾರ ಸುಮಾರು 2 ಸಾವಿರ ಕೋಟಿಗೂ ಅಧಿಕ ಆಸ್ತಿ ರೈ ಹೆಸರಿನಲ್ಲಿದೆ. ದೇವನಹಳ್ಳಿ, ಯಲಹಂಕ, ಬಿಡದಿಯಲ್ಲಿ 150ಕ್ಕೂ ಅಧಿಕ ಎಕರೆ ಜಾಗ, ಮೈಸೂರು, ಮಂಗಳೂರು, ಬಂಟ್ವಾಳ, ಪುತ್ತೂರಿನಲ್ಲಿ ನೂರಾರು ಎಕರೆ ಜಮೀನು ಮುತ್ತಪ್ಪ ರೈ ಹೆಸರಿನಲ್ಲಿದೆ. ಸಕಲೇಶಪುರದಲ್ಲಿ 200 ಎಕರೆ ಜಮೀನಿದೆ.

ಹಂಚಿಕೆ ಹೇಗೆ?
ಒಟ್ಟು 600ಕ್ಕೂ ಅಧಿಕ ಎಕರೆ ಜಮೀನನ್ನು ತನ್ನಿಬ್ಬರು ಮಕ್ಕಳಾದ ರಿಕ್ಕಿ ಹಾಗೂ ರಾಖಿ ರೈಗೆ ಗಿಫ್ಟ್ ಡೀಡ್ ಮಾಡಿದ್ದಾರೆ. ಆಸ್ತಿಗಳ ಪೈಕಿ ಮೈಸೂರು, ಪುತ್ತೂರು, ಬಂಟ್ವಾಳ, ಮಂಗಳೂರು ಜಾಗವನ್ನು ರಾಖಿ ರೈಗೆ ನೀಡಿದ್ದರೆ, ಸಕಲೇಶಪುರ, ಬಿಡದಿ, ಯಲಹಂಕ ಹಾಗೂ ದೇವನಹಳ್ಳಿ ಜಾಗವನ್ನು ಚಿಕ್ಕ ಮಗ ರಿಕ್ಕಿ ರೈಗೆ ಹಂಚಿಕೆ ಮಾಡಿದ್ದಾರೆ.

ಆಪ್ತರು, ಸಂಬಂಧಿಕರಿಗೆ ಶೇ.20 ರಷ್ಟು ಆಸ್ತಿ ನೀಡಬೇಕೆಂದು ಸೂಚಿಸಿದ್ದಾರೆ. ಬಿಡದಿ ಹಾಗೂ ಸದಾಶಿವನಗರದ ಎರಡೂ ಮನೆಗಳ ಜವಾಬ್ದಾರಿಯನ್ನು ಚಿಕ್ಕ ಮಗ ರಿಕ್ಕಿ ರೈಗೆ ನೀಡಿದ್ದು ಟ್ರೇಡಿಂಗ್ ವ್ಯವಹಾರ ಕಂಪನಿಯನ್ನು ದೊಡ್ಡ ಮಗ ರಾಖಿ ನೋಡಿಕೊಳ್ಳುವಂತೆ ಸೂಚಿಸಿದ್ದರು.

ಕೆಲಸಗಾರರಿಗೆ ಸೈಟ್:
ನಂಬಿಕೆಯಿಂದ 15 ವರ್ಷಗಳ ಕಾಲ ತನ್ನ ಬಳಿ ಕೆಲಸ ಮಾಡಿದ 25 ಕೆಲಸಗಾರರಿಗೆ ಒಂದೊಂದು ಸೈಟ್ ಹಾಗೂ ಕೈಲಾದಷ್ಟು ಹಣ ನೀಡುವಂತೆ ಕಿರಿಯ ಮಗ ರಿಕ್ಕಿ ರೈಗೆ ಸೂಚಿಸಿದ್ದರು. ತಂದೆಯ ಸೂಚನೆಯಂತೆ ರಿಕ್ಕಿ ತಲಾ ಒಬ್ಬೊಬ್ಬರಿಗೆ 3 ಲಕ್ಷ ರೂಪಾಯಿಗಳನ್ನು ಹಂಚಿಕೆ ಮಾಡಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow