Namma Metro: ಮೆಟ್ರೋ ಹತ್ತುವ ಯುವತಿಯರೇ ಎಚ್ಚರ! ಆಕ್ಷೇಪಾರ್ಹ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್..!

ಮೇ 21, 2025 - 12:21
 0  7
Namma Metro: ಮೆಟ್ರೋ ಹತ್ತುವ ಯುವತಿಯರೇ ಎಚ್ಚರ! ಆಕ್ಷೇಪಾರ್ಹ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್..!

ಬೆಂಗಳೂರು: ಮೆಟ್ರೋಗೆ ಸಂಬಂಧಿಸಿದ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹಾಗಾಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿರುತ್ತವೆ. ಅದರಲ್ಲೂ ಇದೀಗ ಮೆಟ್ರೋದಲ್ಲೂ ಕಾಮುಕರ ಹಾವಳಿ ಹೆಚ್ಚಾಗಿದೆ. ಹೌದು ನಮ್ಮ ಮೆಟ್ರೋದಲ್ಲಿ ಹೆಣ್ಣುಮಕ್ಕಳ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮೆಟ್ರೋ ಕ್ಲಿಕ್ಸ್” ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಮೆಟ್ರೋದಲ್ಲಿನ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಅಪ್ಲೋಡ್​ ಮಾಡಲಾಗಿದೆ. 5,538 ಹಿಬಾಲಕರನ್ನು ಹೊಂದಿರುವ ಖಾತೆಯಲ್ಲಿ ಸುಮಾರು 13ಕ್ಕೂ ಹೆಚ್ಚು ವಿಡಿಯೋಗಳನ್ನು ಅಪರಿಚಿತನೋರ್ವ ಹಂಚಿಕೊಂಡಿದ್ದಾನೆ. ಮೆಟ್ರೋ ರೈಲಿನ ಒಳಗೆ, ನಿಲ್ದಾಣಗಳಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ರೆಕಾರ್ಡ್ ಮಾಡಲಾಗಿದೆ.

ಸದ್ಯ ಅಪರಿಚಿತನ ವಿಕೃತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಲ್ಲಾ ವಿಡಿಯೋಗಳು ಡಿಲೀಟ್ ಆಗಿವೆ. ಐಟಿ ಆ್ಯಕ್ಟ್ 2008 ಸೆಕ್ಷನ್ 67, ಬಿಎನ್ಎಸ್ 78(2)ರಡಿ ಬನಶಂಕರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇನ್ನು ಘಟನೆ ಬಗ್ಗೆ ಕೆಲ ಜನರು ಧ್ವನಿ ಎತ್ತಿದ್ದು, ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow