Nandini Milk: ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್! ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ಬೆಲೆ ಭಾರೀ ಏರಿಕೆ

ಡಿಸೆಂಬರ್ 26, 2024 - 19:11
 0  14
Nandini Milk: ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್! ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ಬೆಲೆ ಭಾರೀ ಏರಿಕೆ

ಬೆಂಗಳೂರು: ರಾಜ್ಯದ ಜನರಿಗೆ ಮತ್ತೆ ಬೆಲೆ ಏರಿಕೆ ಬಿಸಿತಟ್ಟಿದೆ.  ಪೆಟ್ರೋಲ್​, ಡಿಸೇಲ್​ ಆಯ್ತು ನಿತ್ಯೋಪಯೋಗಿ ವಸ್ತುಗಳ ಬೆಲೆ ಕೂಡ ಏರಿಕೆ ಆಯ್ತು, ಎಲ್ಲಾ ಬೆಲೆಗಳು ಗಗನಕ್ಕೇರಿರುವಾಗಲೇ ಸರ್ಕಾರ ಹಾಲಿನ ದರ ಕೂಡ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಲಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂ. ಏರಿಸುವ ಕುರಿತು ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಎಲ್‌. ಭೀಮಾನಾಯ್ಕ ಅವರು ಗುರುವಾರ ಮುನ್ಸೂಚನೆ ನೀಡಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾವನೆ ಹೋಗಿದ್ದು, ಸರ್ಕಾರದ ಹಂತದಲ್ಲಿ ದರ ಏರಿಕೆ ಕುರಿತಾಗಿ ತೀರ್ಮಾನ ಕೈಗೊಳ್ಳಬೇಕು ಎನ್ನುವ ಅಭಿಪ್ರಾಯವನ್ನು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ ಹೇಳಿದ್ದಾರೆ.

ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷದಲ್ಲಿ ರೈತರಿಗೆ ಕನಿಷ್ಠ 5 ರೂ.ನಷ್ಟು ಹಾಲಿನ ದರ ಹೆಚ್ಚಿಸುವ ಮೂಲಕ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ನೀಡಲಿದ್ದಾರೆ. ಸಿಎಂ ಶೀಘ್ರದಲ್ಲೇ ರಾಜ್ಯದ ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು, ಹಾಲು ಉತ್ಪಾದಕ ರೈತರಹಿತ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow