Narendra Modi: ಆಟದ ಮೈದಾನದಲ್ಲೂ ಆಪರೇಷನ್ ಸಿಂಧೂರ್! ಪ್ರಧಾನಿ ಮೋದಿ ಅಭಿನಂದನೆ
ಏಷ್ಯಾಕಪ್ ಕ್ರಿಕೆಟ್ ಫೈನಲ್‌ನಲ್ಲಿ ಭಾರತ ಪಾಕಿಸ್ತಾನವನ್ನು ಮಣಿಸಿ 17ನೇ ಆವೃತ್ತಿಯ ಚಾಂಪಿಯನ್ ಪಟ್ಟವನ್ನು ಕಿರೀಟಿಸಿದೆ. ನಿನ್ನೆ ರಾತ್ರಿ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನಿಂದ ಭಾರತ ತನ್ನ ಒಂಬತ್ತನೇ ಏಷ್ಯಾಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಭಾರತ ತಂಡದ ಪಾಕಿಸ್ತಾವನ್ನ ಬಗ್ಗುಬಡಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡಿ ಭಾರತ ತಂಡವನ್ನ ವಿಶೇಷ ರೀತಿಯಲ್ಲಿ ಅಭಿನಂದಿಸಿದ್ದಾರೆ. ಈ ಗೆಲುವನ್ನು "ಆಟದ ಕ್ಷೇತ್ರದಲ್ಲಿ ಆಪರೇಷನ್ ಸಿಂದೂರ್" ಎಂದು ಕರೆದಿದ್ದಾರೆ. ಗೇಮ್ ಫೀಲ್ಡ್ನಲ್ಲೂ ಆಫರೇಷನ್ ಸಿಂಧೂರ್, " ಫಲಿತಾಂಶ ಎರಡರಲ್ಲೂ ಒಂದೇ – ಭಾರತಕ್ಕೆ ಗೆಲುವು" ಎಂದು ಮೋದಿ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು. ಈ ದಾಳಿಯ ವೇಳೆ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳನ್ನ ಭಾರತ ವಾಯು ಸೇನ್ ಧ್ವಂಸಗೊಳಿಸಿತ್ತು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್-ಎ-ಮೊಹಮ್ಮದ್ (JeM) ಮತ್ತು ಲಷ್ಕರ್-ಎ-ತೈಬಾ (LeT) ನಂತಹ ಉಗ್ರ ಸಂಘಟನೆಗಳ 9 ತರಬೇತಿ ಶಿಬಿರಗಳನ್ನು ನಾಶಪಡಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ದಾಳಿ ನಡೆಸಿತ್ತು. ಇದಕ್ಖೂ ಪ್ರತಿಕ್ರಿಯೆ ನೀಡಿದ್ದ ಭಾರತೀಯ ಸೇನೆ ಹಲವು ಪಾಕಿಸ್ತಾನದ ವಾಯುನೆಲೆಗಳನ್ನ ಧ್ವಂಸ ಮಾಡಿತ್ತು.
ನಿಮ್ಮ ಪ್ರತಿಕ್ರಿಯೆ ಏನು?