Nimisha priya case: ನರ್ಸ್ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸಮ್ಮತಿ

ಜುಲೈ 10, 2025 - 21:01
 0  13
Nimisha priya case: ನರ್ಸ್ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸಮ್ಮತಿ

ದೆಹಲಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೆಮೆನ್‌ನಲ್ಲಿ ಮರಣದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣ ಮತ್ತೊಂದು ಮಹತ್ವದ ಹಂತ ತಲುಪಿದೆ. ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರ ರಾಜತಾಂತ್ರಿಕ ಹಸ್ತಕ್ಷೇಪ ಮಾಡಿ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಬೇಕೆಂದು ಕೇಳಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಯೆಮೆನ್ ಸರ್ಕಾರ ಜುಲೈ 16ರಂದು ಗಲ್ಲು ಶಿಕ್ಷೆ ನಿಗದಿಪಡಿಸಿದ್ದು, ಅದಕ್ಕೂ ಮುನ್ನ ಜುಲೈ 14ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಹಾಗೂ ಜೋಯ್ಮಲ್ಯ ಬಾಗ್ಚಿ ಅವರ ಪೀಠ ಈ ವಿಚಾರಣೆ ನಡೆಸಲಿದೆ.

ಪ್ರಕರಣದ ಹಿನ್ನೆಲೆ:

ಪಾಲಕ್ಕಾಡ್ ಮೂಲದ 38 ವರ್ಷದ ನರ್ಸ್ ಆಗಿರುವ ನಿಮಿಷಾ ಪ್ರಿಯಾ ಅವರು 2017ರಲ್ಲಿ ಉದ್ಯೋಗಕ್ಕಾಗಿ ಯೆಮೆನ್‌ಗೆ ತೆರಳಿದ್ದರು. ಅಲ್ಲಿಯ ಬ್ಯುಸಿನೆಸ್ ಪಾರ್ಟನರ್‌ನನ್ನು ಕೊಂದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದ್ದು, 2020ರಲ್ಲಿ ಮರಣದಂಡನೆ ವಿಧಿಸಲಾಗಿತ್ತು. ಅವರ ಅಂತಿಮ ಮೇಲ್ಮನವಿಯು 2023ರಲ್ಲಿ ತಿರಸ್ಕೃತವಾಗಿತ್ತು.

ತುರ್ತು ಅರ್ಜಿ ಮತ್ತು ಹೋರಾಟ:

“ಸೇವ್ ನಿಮಿಷಾ ಪ್ರಿಯಾ – ಇಂಟರ್‌ನ್ಯಾಷನಲ್ ಆಕ್ಷನ್ ಕೌನ್ಸಿಲ್” ಎಂಬ ಸಂಸ್ಥೆ ಕಾನೂನು ಬೆಂಬಲದೊಂದಿಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಇದನ್ನು ತುರ್ತಾಗಿ ವಿಚಾರಿಸಲು ನ್ಯಾಯಾಲಯ ಒಪ್ಪಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow