Om Prakash Case: ಓಂ ಪ್ರಕಾಶ್ ಸಾವಿಗೆ ಕಾರಣವಾಯ್ತಾ ಆಸ್ತಿ ಕಲಹ..? ಬೆಚ್ಚಿ ಬೀಳಿಸುವ ಸಂಗತಿಗಳು ಬಯಲು

ಎಪ್ರಿಲ್ 21, 2025 - 21:31
 0  13
Om Prakash Case: ಓಂ ಪ್ರಕಾಶ್ ಸಾವಿಗೆ ಕಾರಣವಾಯ್ತಾ ಆಸ್ತಿ ಕಲಹ..? ಬೆಚ್ಚಿ ಬೀಳಿಸುವ ಸಂಗತಿಗಳು ಬಯಲು

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಂಬಂದ ಅವರ ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದುಕೊಂಡಿರುವ ಬೆಂಗಳೂರು   ಪೊಲೀಸರಿಗೆ ಒಂದೊಂದೇ ಭಯಾನ ವಿಚಾರಗಳು ತಿಳಿದುಬರುತ್ತಿವೆ. ಇದೀಗ ಬೆಂಗಳೂರು ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸರ್ಕಾರಿ ಗೌರವದೊಂದಿಗೆ ನಿವೃತ್ತ ಪೊಲೀಸ್​ ಅಧಿಕಾರಿಯ ಅಂತ್ಯಕ್ರಿಯೆ ನೆರವೇರಿದೆ. ಮಗ ಕಾರ್ತಿಕೇಶ್ ಅಂತ್ಯ ಸಂಸ್ಕಾರ ನೆರವೇರಿಸಿದ್ರು. ಇತ್ತ HSR ಲೇಔಟ್ ಠಾಣೆಯಲ್ಲಿ ಅಮ್ಮ-ಮಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.     

ಓಂ ಪ್ರಕಾಶ್ ಸಾವಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಡಿದ ಆಸ್ತಿಯೂ ಕಾರಣವಾಯ್ತ ಎಂಬ ಅನುಮಾನ ಇದೀಗ ದಟ್ಟವಾಗಿದೆ. ಓಂ ಪ್ರಕಾಶ್ ಅವರು 1996ರಲ್ಲಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಇದಲ್ಲದೇ ಇವರ ಸಹೋದರಿ ಜೋಯಿಡಾದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಹಿಂದಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಇಲ್ಲಿನ ಪರಿಸರಕ್ಕೆ ಮನಸೋತಿದ್ದ ಅವರು 2011-12ರ ನಡುವೆ ಸಾಮಜೋಯಿಡಾದಲ್ಲಿ 2 ಎಕ್ರೆ 17 ಗುಂಟೆ ಜಮೀನು ಖರೀದಿಸಿದ್ದರು.

ಜೊತೆಗೆ ಜೋಯಿಡಾ (Joida) ತಾಲೂಕಿನ ಗಣೇಶ ಗುಡಿಯ ಬಾಡಗುಂದ ಗ್ರಾಮದಲ್ಲಿ 17 ಎಕ್ರೆ ಜಮೀನು ಖರೀದಿ ಮಾಡಿದ್ದು, ಈ 2 ಜಮೀನನ್ನು ಮಗ ಕಾರ್ತೀಕೇಶ್ ಹೆಸರಲ್ಲಿ ನೋಂದಣಿ ಮಾಡಿಸಿದ್ದರು. ಗಣೇಶ ಗುಡಿಯ ಬಾಡಗುಂದ ಗ್ರಾಮದ 17 ಎಕ್ರೆಯಲ್ಲಿ 10 ಎಕ್ರೆ ಬೇರೆಯವರ ಹೆಸರಲ್ಲಿ ಇಡಲಾಗಿತ್ತು.

ಸಾಮಜೋಯಿಡಾದಲ್ಲಿ ಗಂಧ, ಸಾಗುವಾನಿ ಸೇರಿದಂತೆ ವಾಣಿಜ್ಯ ಬೆಳೆಯನ್ನು ಬೆಳೆದಿದ್ದು, ಇಲ್ಲಿಯೇ ಗೆಸ್ಟ್ ಹೌಸ್ ನಿರ್ಮಿಸಿದ್ದರು. ಗಣೇಶ ಗುಡಿಯ ಬಾಡಗುಂದ ಗ್ರಾಮದಲ್ಲಿದ್ದ 5 ಎಕ್ರೆ ಜಮೀನನ್ನು ರಿವರ್ ರಾಫ್ಟಿಂಗ್ ಮಾಡಲು ಲೀಸ್‌ಗೆ ನೀಡಿದ್ದರು. ಉಳಿದ 10 ಎಕ್ರೆ ಜಮೀನನ್ನು ಬೇನಾಮಿ ಇಟ್ಟಿದ್ದು, ಈ ಜಮೀನನ್ನು ತನ್ನ ಸಹೋದರಿಯ ಹೆಸರಿಗೆ ಮಾಡಲು ಸಿದ್ಧರಾಗಿದ್ದರು. ಈ ವಿಚಾರಕ್ಕೆ ಪತ್ನಿ ಹಾಗೂ ಮಗಳ ಮಧ್ಯೆ ಜಗಳ ನಡೆಯುತ್ತಿತ್ತು ಎನ್ನಲಾಗುತ್ತಿದೆ.        

ಮನೆಯಲ್ಲಿ ಕಿತ್ತಾಟ ಜಾಸ್ತಿಯಾದಾಗ ಜೋಯಿಡಾದ ಗೆಸ್ಟ್ ಹೌಸ್‌ಗೆ ಬಂದು ಇಲ್ಲಿನ ಗೆಳೆಯರು ಜೊತೆ ಸಮಯ ಕಳೆಯುತ್ತಿದ್ದರು. ಓಂ ಪ್ರಕಾಶ್ ಅವರು ಬಹುತೇಕ ಎಲ್ಲೇ ಹೋದರೂ ಪತ್ನಿಯನ್ನು ಬಿಟ್ಟು ಬರುತಿದ್ದರು. ಅಷ್ಟೇ ಅಲ್ಲದೇ ಅವರು ಮಾನಸಿಕವಾಗಿ ನೊಂದಿದ್ದರು ಬಗ್ಗೆ ಅವರ ಸಹವರ್ತಿಗಳು ಹೇಳಿದ್ದಾರೆ. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow