Operation Mahadev: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರನ್ನು ಹತ್ಯೆಗೈದ ಸೇನೆ!

ಜುಲೈ 28, 2025 - 16:10
 0  10
Operation Mahadev: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರನ್ನು ಹತ್ಯೆಗೈದ ಸೇನೆ!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಡಚಿಗಮ್ ರಾಷ್ಟ್ರೀಯ ಉದ್ಯಾನವನದ ಬಳಿ ಭಾರತೀಯ ಸೇನೆಯು ಪ್ರಾರಂಭಿಸಿರುವ ಆಪರೇಷನ್ 'ಮಹಾದೇವ್' ಯಶಸ್ವಿಯಾಗಿ ಮುಂದುವರಿದಿದ್ದು, ಇದರಲ್ಲಿ ಮೂವರು ಭಯೋತ್ಪಾದಕರು ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

 ಈ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ. ಪಹಲ್ಗಾಮ್ ಘಟನೆಯ ನಂತರ, ಸೇನೆಯು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಅವರ ತಲೆಗೆ ತಲಾ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಕೊಂದ ಮೂವರು ಭಯೋತ್ಪಾದಕರನ್ನು ಭಾರತೀಯ ಪಡೆಗಳು ಕೊಂದಿವೆ. ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow