Operation Sindhoor: ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್: ಆಕ್ರೋಶದ ಬೆನ್ನಲ್ಲೇ ಪೋಸ್ಟ್‌ ಡಿಲೀಟ್‌

ಮೇ 7, 2025 - 10:37
 0  24
Operation Sindhoor: ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್: ಆಕ್ರೋಶದ ಬೆನ್ನಲ್ಲೇ ಪೋಸ್ಟ್‌ ಡಿಲೀಟ್‌

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ. ಭಾರತದ ಮಾಸ್ಟರ್​ ಸ್ಟ್ರೋಕ್​ಗೆ 80ಕ್ಕೂ ಹೆಚ್ಚು ಉಗ್ರರು ಹತರಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಇದರ ನಡುವೆ ಟ್ವೀಟ್​ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿದ್ದ ಕರ್ನಾಟಕ ಕಾಂಗ್ರೆಸ್​ಅನ್ನು ಜನರು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಆಕ್ರೋಶ ಬೆನ್ನಲ್ಲೇ ಇದೀಗ ಕಾಂಗ್ರೆಸ್​ ತನ್ನ ಟ್ವೀಟ್​​ನ್ನು ಡಿಲೀಟ್ ಮಾಡಿದೆ.

ಉಗ್ರರ ವಿರುದ್ಧ ಆಪರೇಷನ್​ ಸಿಂಧೂರ್ ಮೂಲಕ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಹೀಗಿರುವಾಗಲೇ ರಾಜ್ಯ ಕಾಂಗ್ರೆಸ್​ ‘ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ’ ಎಂದು ಟ್ವೀಟ್​ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು.

ಆದರೆ ಕೆಲವೇ ಕ್ಷಣದಲ್ಲಿ ಕಾಂಗ್ರೆಸ್ಸಿಗರು ಸೇರಿದಂತೆ ಜನರು ತೀವ್ರ ಕಿಡಿಕಾರಿದ್ದರು. ವ್ಯಾಪಕ ಆಕ್ರೋಶ ಬೆನ್ನಲ್ಲೇ ಕಾಂಗ್ರೆಸ್​ ಆ ಟ್ವೀಟ್​​ನ್ನು ಡಿಲೀಟ್​ ಮಾಡಿದೆ. ಬಳಿಕ ಭಾರತೀಯ ಸೇನೆಯನ್ನು ಹೊಗಳುವ ಮೂಲಕ ಮತ್ತೊಂದು ಹೊಸ ಟ್ವೀಟ್ ಮಾಡಿದೆ.

ವಿಶ್ವದ ಬಲಿಷ್ಠ ವಾಯುಪಡೆಗಳಲ್ಲಿ ಒಂದು ಎಂದು ಗುರುತಿಸಿಕೊಂಡಿರುವ ಭಾರತೀಯ ವಾಯುಪಡೆ ಪಾಕ್​ ಮೇಲೆ ದಾಳಿ ಮಾಡುವ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸೂಕ್ತ ಉತ್ತರ ನೀಡಿದೆ. ನಾವು ಸರ್ಕಾರದೊಂದಿಗೆ ಮತ್ತು ಭದ್ರತಾ ಪಡೆಗಯೊಂದಿಗೆ ನಿಲ್ಲುತ್ತೇವೆ ಎಂದು ರಾಜ್ಯ ಕಾಂಗ್ರೆಸ್​ ಟ್ವೀಟ್ ಮಾಡಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow