Operation Sindoor: ಪಾಕ್ ವಿರುದ್ಧ ‘ಆಪರೇಷನ್ ಸಿಂಧೂರ್’: 80ಕ್ಕೂ ಹೆಚ್ಚು ಭಯೋತ್ಪಾದಕರು ಉಡೀಸ್..!

ಭಾರತ – ಪಾಕಿಸ್ತಾನ ಎರಡೂ ದೇಶಗಳು ಯುದ್ಧದ ತಯಾರಿಯಲ್ಲಿವೆ. ಗಡಿಯಲ್ಲಿ ಮಿಲಿಟರಿ ಹಾಗೂ ಭದ್ರತಾ ಚಟುವಟಿಕೆಗಳನ್ನು ಗಮನಿಸಿದರೆ ಯುದ್ಧ ನಡೆಯೋದು ಪಕ್ಕಾ ಎನ್ನಲಾಗುತ್ತಿದೆ. ಇದರ ನಡುವೆ ಭಯೋತ್ಪಾದಕ ಶಿಬಿರಗಳ ಮೇಲೆ ಗುರಿಯಾಗಿಸಿಕೊಂಡು ಭಾರತ ಆಪರನ್ ಶುರುಮಾಡಿದೆ. ಪಾಕ್ ಮೇಲೆ ದಾಳಿಯನ್ನು ‘ಆಪರೇಷನ್ ಸಿಂಧೂರ್’ ಎಂದು ಕರೆಯಲಾಗಿದೆ. ಪಾಕಿಸ್ತಾನದ 9 ಪ್ರದೇಶದಲ್ಲಿರುವ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ. ಭಾರತದ ರಕ್ಷಣಾ ಸಚಿವಾಲಯ ಈ ಕುರಿತು ವಿವರಣೆ ನೀಡಿದೆ.
ಐಎಎಫ್ ಫೈಟರ್ ಜೆಟ್‌ಗಳು ವೈಮಾನಿಕ ದಾಳಿ ನಡೆಸಿದರೆ, ಸೇನೆಯು ಕ್ಷಿಪಣಿಗಳನ್ನು ಉಡಾಯಿಸಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಈ ದಾಳಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇಂದು ಬೆಳಗ್ಗೆ ರಕ್ಷಣಾ ಸಚಿವಾಲಯ ಮಹತ್ವದ ಸುದ್ದಿಗೋಷ್ಟಿ ನಡೆಸಲಿದ್ದು, ಈ ಬಗ್ಗೆ ನಿಖರ ಮಾಹಿತಿ ಸಿಗಲಿದೆ.
ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ಈ ದಾಳಿ ಆಗಿದೆ. ಮುರೀದ್ಕೆ, ಮುಜಾಫರ್ಬಾದ್, ಬಹಾವಲ್ಪುರ್, ಕೋಟ್ಲಿ, ಚಾಕ್ಅಮ್ರು, ಗುಲ್ಪುರ್, ಭಿಂಬರ್ನಲ್ಲಿ ದಾಳಿ ಆಗಿದೆ. ಏಪ್ರಿಲ್ 22 ರಂದು ಪಾಕ್ ಬೆಂಬಲಿತ ಉಗ್ರರು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಪೈಶಾಚಿಕ ಕೃತ್ಯ ನಡೆಸಿದ್ದರು. ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಜೀವ ಕಳೆದುಕೊಂಡಿದ್ದರು. ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿತ್ತು.
ನಿಮ್ಮ ಪ್ರತಿಕ್ರಿಯೆ ಏನು?






