Operation Sindoor: ಮತ್ತೆ ಜಮ್ಮುವಿನ ಮೇಲೆ ಪಾಕ್ ದಾಳಿ: 50ಕ್ಕೂ ಹೆಚ್ಚು ಡ್ರೋನ್’ಗಳು ಉಡೀಸ್ ಮಾಡಿದ ಭಾರತ

ಪಾಕಿಸ್ತಾನದ ಕರಾಚಿ ಬಂದರನ್ನು ಭಾರತ ಸರ್ವನಾಶ ಮಾಡಿದೆ. ಐಎನ್ಎಸ್ ವಿಕ್ರಾಂತ್ 10ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಕರಾಚಿ ಬಂದರನ್ನು ಧ್ವಂಸಗೊಳಿಸಿದೆ. ಭಾರತದ ನೌಕಾಪಡೆ ಮಿಂಚಿನ ಕಾರ್ಯಾಚರಣೆ ನಡೆಸಿ ಈ ಬೃಹತ್ ದಾಳಿ ನಡೆಸಿದೆ. ಅದಲ್ಲದೆ ಜಮ್ಮುವಿನ ಮೇಲೆ ಪಾಕ್ 100 ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಕೌಂಟರ್ ಅಟ್ಯಾಕ್ ಮಾಡಿರುವ ಭಾರತ ಲಾಹೋರ್ ಮೇಲೆ ಮಿಸೈಲ್ಗಳ ಸುರಿಮಳೆ ಗರೆದಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಪಾಕ್ ಮತ್ತು ಅಲ್ಲಿನ ಜನತೆ ತತ್ತರಿಸಿದೆ. ಇಷ್ಟಾಗಿಯೂ ಕಿತಾಪತಿ ಬಿಡದ ಪಾಕಿಸ್ತಾನ ಮತ್ತೆ ಭಾರತದ ಜಮ್ಮುವಿನ ಮೇಲೆ ದಾಳಿಗೆ ವಿಫಲಯತ್ನ ನಡೆಸಿದೆ.
ಜಮ್ಮುವಿನಲ್ಲಿ ಇದುವರೆಗೆ ಪಾಕಿಸ್ತಾನದ 50ಕ್ಕೂ ಹೆಚ್ಚು ಡ್ರೋನ್ ದಾಳಿಯನ್ನು ಭಾರತೀಯ ವಿಫಲಗೊಳಿಸಿದೆ. ಭಾರತೀಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಹಾಗೂ ವಿವಿಧ ಪ್ರದೇಶಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿತ್ತು. ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್ಕೋಟ್, ಅಮೃತಸರ, ಕಪುರ್ತಲ, ಜಲಂಧರ್, ಲುಧಿಯಾನ, ಆದಂಪುರ, ಬಟಿಂಡಾ, ಚಂಡೀಗಢ, ನಾಲ್, ಫಲೋಡಿ, ಉತ್ತರಲೈ, ಭುಜ್ ಸೇರಿ ಒಟ್ಟು 15 ನಗರಗಳ ಮೇಲೂ ದಾಳಿಗೆ ಸಂಚುಮಾಡಿತ್ತು. ಆದ್ರೆ ಭಾರತೀಯ ಸೇನೆ ಎಲ್ಲಾ ದಾಳಿಯನ್ನ ವಿಫಲಗೊಳಿಸಿದೆ.
ಮೇ 7 ರಂದು ಭಾರತ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿದ್ದ 9 ಭಯೋತ್ಪಾದಕರ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಉಗ್ರರನ್ನು ಧ್ವಂಸಮಾಡಿದೆ, ಇದಕ್ಕೆ ಪ್ರತಿಯಾಗಿ ಪಾಕ್ ಭಾರತದ ಅಮಾಯಕ ನಾಗರಿಕರ ಮೇಲೆ ದಾಳಿ ಮಾಡಿ 16 ಜನರನ್ನು ಕೊಂದಿದೆ. ಅಲ್ಲದೆ ಉದ್ಧಟತನ ತೋರಿರುವ ಪಾಕಿಸ್ತಾನ ಸೈನ್ಯ ಗುರುವಾರ ಸಂಜೆಯಿಂದ ಕ್ಷಿಪಣಿ ದಾಳಿ ಮಾಡಿದೆ. ಜಮ್ಮುವಿನ ಮೇಲೆ ದಾಳಿ ಮುಂದುವರಿಸಿದೆ. ಭಾರತ ಪ್ರತಿದಾಳಿ ಮಾಡಿ, ಪಾಕಿಸ್ತಾನದ ಕ್ಷಿಪಣಿಗಳನ್ನು ಹೊಡೆದುರುಳಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






