Pahalgam Attack: ಜಮ್ಮುಕಾಶ್ಮೀರದಲ್ಲಿ 48 ರೆಸಾರ್ಟ್ʼಗಳು, ಅರ್ಧದಷ್ಟು ಪ್ರವಾಸಿ ತಾಣಗಳು ಬಂದ್!

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಕಾರಣಗಳಿಂದಾಗಿ 48 ಪ್ರಮುಖ ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಪಹಲ್ಗಾಮ್ ಉಗ್ರ ದಾಳಿ ಹಿನ್ನೆಲೆ ಭದ್ರತಾ ಏರ್ಪಾಡುಗಳನ್ನು ಮತ್ತಷ್ಟು ಬಲಪಡಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರವಾಸಿಗರ ಸುರಕ್ಷತೆ ಪ್ರಧಾನ ಲಕ್ಷ್ಯವಾಗಿದ್ದು, ಸ್ಥಳೀಯರ ಸಹಕಾರದೊಂದಿಗೆ ಸದ್ಯ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಅಧಿಕಾರಿಗಳು ತೊಡಗಿದ್ದಾರೆ.
ಪ್ರವಾಸೋದ್ಯಮಕ್ಕೆ ತಾತ್ಕಾಲಿಕ ಧಕ್ಕೆ ಉಂಟಾದರೂ, ಶೀಘ್ರ ಪರಿಸ್ಥಿತಿ ಸುಧಾರಿಸಲು ಸರ್ಕಾರ ತ್ವರಿತ ಕ್ರಮಗಳನ್ನು ಕೈಗೊಂಡಿದೆ. ಜನರ ಭದ್ರತೆಗಾಗಿ ಕೈಗೊಳ್ಳುತ್ತಿರುವ ಈ ಕ್ರಮವನ್ನು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.
ಇನ್ನು ತೆರೆದಿರುವ ತಾಣಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತದೆ. ಒಂದು ವಾರದ ಹಿಂದಷ್ಟೇ ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿದ್ದರು. 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದ್ದರು.ಈ ದಾಳಿಯ ಹೊಣೆಯನ್ನು ಲಷ್ಕರ್ -ಎ- ತೊಯ್ಬಾದ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿತ್ತು. ಆಕ್ರೋಶ ವ್ಯಕ್ತವಾದ ಬಳಿಕ ನಮ್ಮ ಖಾತೆಯನ್ನು ಯಾರೋ ಹ್ಯಾಕ್ ಮಾಡಿದ್ದಾರೆ. ನಮಗೂ ದಾಳಿಗೂ ಸಂಬಂಧವಿಲ್ಲ ಎಂದು ನುಣುಚಿಕೊಳ್ಳಲು ಪ್ರಯತ್ನಿಸಿತ್ತು.
ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಏಪ್ರಿಲ್ 23 ರಂದು 112 ವಿಮಾನಗಳ ಮೂಲಕ 17,653 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಅವುಗಳಲ್ಲಿ 6,561 ಆಗಮನಗಳು ಮತ್ತು 11,092 ನಿರ್ಗಮನಗಳು. ಏಪ್ರಿಲ್ 24 ರಂದು, 4,456 ಆಗಮನಗಳು ಮತ್ತು 11,380 ನಿರ್ಗಮನಗಳು ಸೇರಿದಂತೆ 15,836 ಪ್ರಯಾಣಿಕರ ದಟ್ಟಣೆ ಇತ್ತು.
ಕಣಿವೆಯಲ್ಲಿ ಅಧಿಕಾರಿಗಳು ಸಕ್ರಿಯ ಭಯೋತ್ಪಾದಕರ ಮನೆಗಳನ್ನು ಸ್ಫೋಟಿಸಿದ ಬಳಿಕ ಕೋಪಗೊಂಡಿರುವ ಉಗ್ರರು ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರ ಬಳಿ ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದು, ಮತ್ತಷ್ಟು ದಾಳಿ ನಡೆಯುವ ಎಚ್ಚರಿಕೆ ಇದ್ದು, ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲುವ ದೃಷ್ಟಿಯಿಂದ ಪ್ರವಾಸಿ ತಾಣಗಳನ್ನೇ ಮುಚ್ಚಲಾಗುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?






