Pahalgam Attack: ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಶಂಕಿತ ಉಗ್ರರ ಫೋಟೋ ರಿಲೀಸ್..!

ಎಪ್ರಿಲ್ 23, 2025 - 14:15
 0  19
Pahalgam Attack: ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಶಂಕಿತ ಉಗ್ರರ ಫೋಟೋ ರಿಲೀಸ್..!

ಜಮ್ಮು-ಕಾಶ್ಮೀರದ ಅನಂತಪುರ ಜಿಲ್ಲೆಯ ಪಹಲ್ಗಾಮ್​​ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿ 26 ಪ್ರವಾಸಿಗರು ಜೀವ ಕಳೆದುಕೊಂಡಿದ್ದಾರೆ. 2019 ಪುಲ್ವಾಮಾ ದಾಳಿ ಬಳಿಕ ಅತ್ಯಂತ ರಣ ಭಯಂಕರ ಉಗ್ರರ ದಾಳಿ ಇದಾಗಿದೆ. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ.

ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ. ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ರೇಖಾಚಿತ್ರದಲ್ಲಿ ತೋರಿಸಲಾಗಿರುವ 3 ಶಂಕಿತ ಭಯೋತ್ಪಾದಕರ ಹೆಸರುಗಳು ಎಂದು ಎನ್ಐಎ ತಿಳಿಸಿದೆ

ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ.

ಮೂಲಗಳ ಪ್ರಕಾರ ಮೂವರು ಭಯೋತ್ಪಾದಕರು ಪ್ರವಾಸಿಗರನ್ನು ಒಟ್ಟುಗೂಡಿಸಿ ಪುರುಷ ಮತ್ತು ಮಹಿಳಾ ಗುಂಪುಗಳಾಗಿ ವಿಂಗಡಿಸಿದ್ದಾರೆ. ನಂತರ ಅವರ ಧರ್ಮ, ಹೆಸರನ್ನು ಕೇಳಿದ್ದಾರೆ. ವೇಳೆ ಹಿಂದೂ ಹೆಸರು ಹೇಳಿದವರ ಮೇಲೆ ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow