Pahalgam Terror Attack: ಪ್ರಧಾನಿ ಮೋದಿ ನೇತೃತ್ವದಲ್ಲಿ 4 ಹೈವೋಲ್ಟೇಜ್ CCPA ಸಭೆ..!

ಎಪ್ರಿಲ್ 30, 2025 - 11:58
 0  12
Pahalgam Terror Attack: ಪ್ರಧಾನಿ ಮೋದಿ ನೇತೃತ್ವದಲ್ಲಿ 4 ಹೈವೋಲ್ಟೇಜ್ CCPA ಸಭೆ..!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಬುದ್ಧಿ ಕಲಿಸಬೇಕು ಎಂಬ ಆಗ್ರಹ ದೇಶಾದ್ಯಂತ ಕೇಳಿ ಬಂದಿದೆ. ಬೆನ್ನಲ್ಲೇ ಪ್ರಧಾನಿ ಮೋದಿ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಾಲ್ಕು ಹೈವೋಲ್ಟೇಜ್ ಸಭೆಗಳು ನಡೆಯಲಿವೆ.

ಇಡೀ ದಿನ ಭದ್ರತಾ ಸಂಪುಟ ಸಮಿತಿ ಸಭೆ, ರಾಜಕೀಯ ವ್ಯವಹಾರಗಳ ಸಮಿತಿ ಸಭೆ, ಆರ್ಥಿಕ ವ್ಯವಹಾರಗಳ ಸಮಿತಿ ಸಭೆ ಹಾಗೂ ಸಚಿವ ಸಂಪುಟ ಸಭೆಗಳು ನಡೆಯಲಿದ್ದು, ಸರಣಿ ಹೈವೋಲ್ಟೇಜ್ ಮೀಟಿಂಗ್‌ಗಳಲ್ಲಿ ಪಾಕಿಸ್ತಾನವನ್ನು ಸದೆಬಡಿಯುವ ಕುರಿತು ಸರ್ಕಾರ ನಿರ್ಣಾಯಕ ನಡೆ ಇಡುತ್ತಾ ಎನ್ನುವ ಪ್ರಶ್ನೆ ಮೂಡಿದೆ. ಜೊತೆಗೆ ಮೋದಿ ಯಾರೂ ಊಹಿಸದ ಸೇನಾ ಕಾರ್ಯಾಚರಣೆಗೆ ಒಪ್ಪಿಗೆ ನೀಡುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಭಯೋತ್ಪಾದನೆಗೆ ಬಲವಾದ ಪ್ರತಿಕ್ರಿಯೆ ನೀಡಲು ಭಾರತ ಸಂಪೂರ್ಣವಾಗಿ ಸಿದ್ಧವಾಗಿದೆ ಎಂಬುದನ್ನು ತೋರಿಸುತ್ತದೆ. ಈ ಸಭೆಗಳಲ್ಲಿ, ಪಾಕಿಸ್ತಾನದ ವಿರುದ್ಧ ಮಿಲಿಟರಿ, ರಾಜತಾಂತ್ರಿಕ ಮತ್ತು ಆರ್ಥಿಕ ಕ್ರಮಗಳ ನೀಲನಕ್ಷೆಯನ್ನು ಸಿದ್ಧಪಡಿಸಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಸಾರಿಗೆ ಸಚಿವ ನಿತಿನ್ ಗಡ್ಕರಿ, ಆರೋಗ್ಯ ಸಚಿವ ಜೆ.ಪಿ. ನಡ್ಡಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಹಲವಾರು ಹಿರಿಯ ಸಚಿವರು ಭಾಗವಹಿಸಲಿದ್ದಾರೆ.

ಮೂರನೇ ಸಭೆಯು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯದ್ದಾಗಿದ್ದು, ಪಾಕಿಸ್ತಾನದ ಮೇಲೆ ಆರ್ಥಿಕ ಒತ್ತಡವನ್ನು ಹೆಚ್ಚಿಸುವ ಕಾರ್ಯತಂತ್ರದ ಕುರಿತು ಚರ್ಚಿಸಲಾಗುವುದು. ಉರಿ ಮತ್ತು ಪುಲ್ವಾಮಾ ದಾಳಿಗಳ ನಂತರ ಭಾರತವು ಪಾಕಿಸ್ತಾನವನ್ನು ಆರ್ಥಿಕವಾಗಿ ದುರ್ಬಲಗೊಳಿಸುವಲ್ಲಿ ಈಗಾಗಲೇ ಯಶಸ್ವಿಯಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow