Pahalgam Terrorist Attack: ಭಾರತದ ವಿರುದ್ಧ ಕತ್ತಿ ಮಸೆಯುತ್ತಿದೆ Pak:‌ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸಿದ ಚೀನಾ!

ಮೇ 6, 2025 - 14:09
 0  14
Pahalgam Terrorist Attack: ಭಾರತದ ವಿರುದ್ಧ ಕತ್ತಿ ಮಸೆಯುತ್ತಿದೆ Pak:‌ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸಿದ ಚೀನಾ!

ಇಸ್ಲಾಮಾಬಾದ್: ಪಾಕ್ಆಕ್ರಮಿತ ಕಾಶ್ಮೀರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪಹಲ್ಗಾಮ್ದಾಳಿಯ ಬಳಿಕ ಭಾರತಕ್ಕೆ ಬಿಸಿ ಮುಟ್ಟಿಸಲು ಹೋಗಿ ಪಾಕಿಸ್ತಾನ ಮತ್ತೆ ತನ್ನ ಕೈ ಸುಟ್ಟುಕೊಂಡಿದೆ. ಇದರ ನಡುವೆ ಪಾಕ್‌ಗೆ ಚೀನಾ ಬೆಂಬಲ ನೀಡುವುದಾಗಿ ತಿಳಿಸಿದೆ.

ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಬಿಗಡಾಯಿಸುವ ಪರಿಸ್ಥಿತಿ ಉಂಟಾಗಿದೆ. ಒಂದು ಕಡೆ ಭಾರತಕ್ಕೆ ರಷ್ಯಾ, ಜಪಾನ್ ಬೆಂಬಲಿ ನೀಡಿದರೆ, ಇನ್ನೊಂದು ಕಡೆ ನೆರೆ ರಾಷ್ಟ್ರ ಚೀನಾ ಪಾಕ್‌ಗೆ ಬೆಂಬಲ ನೀಡುವುದಾಗಿ ಹೇಳಿದೆ. ದಕ್ಷಿಣ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗಾಗಿ ನಾವು ಸದಾ ಪಾಕಿಸ್ತಾನ ಬೆಂಬಲಿಸುತ್ತೇವೆ ಎಂದು ಹೇಳಿದೆ.

ಪಾಕ್ ಅಧ್ಯಕ್ಷ ಅಲಿ ಜರ್ದಾರಿ ಅವರನ್ನು ಪಾಕಿಸ್ತಾನದಲ್ಲಿನ ಚೀನಾ ರಾಯಭಾರಿ ಜಿಯಾಂಗ್ ಜೈಡಾಂಗ್ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಚೀನಾ ಮತ್ತು ಪಾಕಿಸ್ತಾನದ ಸ್ನೇಹ ಶಾಶ್ವತವಾಗಿದೆ.

ಕಾಲ ಕಾಲಕ್ಕೆ ಪರೀಕ್ಷೆಗೆ ಒಳಗಾಗಿದ್ದರೂ ಯಾವಾಗಲೂ ಸವಾಲಿನ ಸಮಯದಲ್ಲಿ ಪರಸ್ಪರ ಬೆಂಬಲಿಸಿದ ಸ್ನೇಹ ನಮ್ಮದಾಗಿದೆ. ಹೀಗಾಗಿ ದಕ್ಷಿಣ ಏಷ್ಯಾ ಶಾಂತಿಗಾಗಿ ಪಾಕ್‌ಗೆ ನಮ್ಮ ಬೆಂಬಲವಿದೆ ಎಂದಿದ್ದಾರೆ. ಪಾಕ್ ಬೆಂಬಲಿಸುವುದಾಗಿ ತಿಳಿಸಿ ಮಾತನಾಡಿದ ಜರ್ದಾರಿ, ಭಾರತವು ಬೇಜಾವಾಬ್ದಾರಿ ಮತ್ತು ಆಕ್ರಮಣಕಾರಿ ನಡೆಯನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow