Pakistani Army: ಪಾಕಿಸ್ತಾನ ಸೇನಾ ವಾಹನದ ಮೇಲೆ ಐಇಡಿ ಸ್ಫೋಟ: 12 ಸೈನಿಕರ ದೇಹ ಛಿದ್ರ ಛಿದ್ರ

ಮೇ 8, 2025 - 12:00
 0  17
Pakistani Army: ಪಾಕಿಸ್ತಾನ ಸೇನಾ ವಾಹನದ ಮೇಲೆ ಐಇಡಿ ಸ್ಫೋಟ: 12 ಸೈನಿಕರ ದೇಹ ಛಿದ್ರ ಛಿದ್ರ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಸಂಘರ್ಷದ ವಾತಾವರಣವಿದೆ. ಇಂಥ ಸಂದರ್ಭದಲ್ಲೇ ಅತ್ತ ಪಾಕಿಸ್ತಾನದ ನೈಋತ್ಯ ಪ್ರಾಂತ್ಯದ ಬಲೂಚಿಸ್ತಾನದ ಕಚ್ಚಿ ಜಿಲ್ಲೆಯ ಮಾಚ್ ಪ್ರದೇಶದಲ್ಲಿ ಬಲೂಚ್ ಲಿಬರೇಷನ್ ಆರ್ಮಿಯು ಪಾಕಿಸ್ತಾನ ಸೇನೆಯ ಯೋಧರು ಸಂಚರಿಸುತ್ತಿದ್ದ ವಾಹನವನ್ನು ಐಇಡಿ ಬಳಸಿ ಸ್ಫೋಟಿಸಿ 12 ಸೈನಿಕರ ಹತ್ಯೆ ಮಾಡಿದೆ. 

ಹೌದು ಬಲೂಚ್‌ ಲಿಬರೇಷನ್‌ ಆರ್ಮಿಯ ಹೋರಾಟಗಾರರು ಪಾಕ್‌ ಸೇನಾ ವಾಹನವನ್ನು ಗುರಿಯಾಗಿಸಿ ಈ ದಾಳಿ ನಡೆಸಿದ್ದಾರೆ. ಈ ವೇಳೆ ವಿಶೇಷ ಕಾರ್ಯಾಚರಣೆ ಕಮಾಂಡರ್ ತಾರಿಕ್ ಇಮ್ರಾನ್ ಮತ್ತು ಸುಬೇದಾರ್ ಉಮರ್ ಫಾರೂಕ್ ಸೇರಿದಂತೆ ಸೇನಾ ವಾಹನದಲ್ಲಿದ್ದ 12 ಸೈನಿಕರು ಸಾವನ್ನಪ್ಪಿದ್ದಾರೆ. 

ಸ್ಫೋಟ ಸಂಭವಿಸಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ (Social Media) ಹರಿದಾಡುತ್ತಿದೆ. ಸ್ಫೋಟದ ತೀವ್ರತೆಗೆ ವಾಹನ ಸಮೇತ ಅದರಲ್ಲಿದ್ದ ಸೈನಿಕರ ದೇಹ ಛಿದ್ರ ಛಿದ್ರವಾಗಿದೆ. ಈ ಬೆನ್ನಲ್ಲೇ ಎಚ್ಚೆತ್ತ ಪಾಕ್‌ ಸೇನೆ ಬಲೂಚ್‌ ಹೋರಾಟಗಾರರನ್ನ ಸದೆಬಡಿಯಲು ಪಣ ತೊಟ್ಟಿದೆ. ಒಂದು ವಾರದ ಹಿಂದೆಯಷ್ಟೇ ಬಲೂಚಿಸ್ತಾನ ಪ್ರಾಂತ್ಯದ ಕಚ್‌ ಮತ್ತು ಜಿಯಾರತ್‌ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಪಾಕಿಸ್ತಾನ ಭದ್ರತಾ ಪಡೆಗಳು 10 ಉಗ್ರರನ್ನ ಕೊಂದಿದ್ದವು, ಇದಕ್ಕೆ ಪ್ರತೀಕಾರವಾಗಿ ಬಲೂಚ್‌ ಉಗ್ರರು ಐಇಡಿ ದಾಳಿ ನಡೆಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow