Pavithra Gowda: ದರ್ಶನ್ ಗೆಳತಿ ಪವಿತ್ರಾ ಗೌಡಗೆ ಮತ್ತೆ ನಿರಾಸೆ! ಸದ್ಯಕ್ಕಿಲ್ಲ ಬೇಲ್ ಭಾಗ್ಯ

ನವೆಂಬರ್ 7, 2024 - 16:00
 0  12
Pavithra Gowda: ದರ್ಶನ್ ಗೆಳತಿ ಪವಿತ್ರಾ ಗೌಡಗೆ ಮತ್ತೆ ನಿರಾಸೆ! ಸದ್ಯಕ್ಕಿಲ್ಲ ಬೇಲ್ ಭಾಗ್ಯ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟಿ ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ. ಇಂದು ಕೋರ್ಟ್ ನಲ್ಲಿ ಪವಿತ್ರಾ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಬೇಲ್​ ಸಿಗುವ ನಿರೀಕ್ಷೆಯಲ್ಲಿ ನಟಿ ಪವಿತ್ರಾ ಗೌಡಗೆ ಮತ್ತೆ ನಿರಾಸೆ ಆಗಿದ್ದು,  ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಆಗಿದ್ದು, ನ.21 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪವಿತ್ರಾ ಗೌಡ , ಅನುಕುಮಾರ್. ನಾಗರಾಜ್, ಲಕ್ಷ್ಮಣ್, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆದಿದೆ.

ಈ ಪೈಕಿ ಎ-1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಆಗಿದ್ದು, ನ.21 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಆಗಿದ್ದು, ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿಂದೆ ಪವಿತ್ರಾ ಪರ ವಕೀಲರು ಈ ಕೇಸ್​ನಲ್ಲಿ ನನ್ನ ಕಕ್ಷಿದಾರರ ಪಾತ್ರವಿಲ್ಲ ಎಂದು ವಾದ ಮಂಡಿಸಿದ್ರು. ದರ್ಶನ್ ಸೂಚನೆಯಂತೆ ಪವನ್ ಹೋಗಿ ರಾಘವೇಂದ್ರಗೆ ಹೇಳಿದ್ದಾನೆ. ಅದರಂತೆ ರಾಘವೇಂದ್ರ ಹಾಗೂ ಉಳಿದ ಆರೋಪಿಗಳು ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಪವಿತ್ರಗೌಡಗೆ ತಮಗೆ ಬರ್ತಾ ಇದ್ದ ಮೆಸೇಜ್ ಬಗ್ಗೆ ಪವನ್ ಗೆ ಹೇಳಿದ್ದರು. ಪವನ್ ಈ ವಿಚಾರವನ್ನು ದರ್ಶನ್ ಅವರ ಗಮನಕ್ಕೆ ತಂದಿದ್ದಾರೆ. ಬಳಿಕ ಅವ್ರೆಲ್ಲಾ ಸೇರಿ ಪ್ಲಾನ್ ಮಾಡಿ ರೇಣುಕಾಸ್ವಾಮಿಯನ್ನು ಕರೆತಂದಿದ್ರು ಎಂದು ವಕೀಲರು ನ್ಯಾಯಾಲಕ್ಕೆ ತಿಳಿಸಿದ್ರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow