Physical Abuse: ನಿಲ್ಲದ ಕಾಮುಕರ ಅಟ್ಟಹಾಸ: ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್..!

ಬೆಳಗಾವಿ: ದೇಶದಲ್ಲಿ ಪ್ರಸ್ತುತ ಪ್ರತಿದಿನ ಮಹಿಳೆಯರು, ಮಕ್ಕಳು ಎನ್ನದೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇವೆ. ಎಷ್ಟೇ ಕಠಿಣ ಕ್ರಮ ಜರುಗಿಸಿದರು ಸಹ ಇಂತಹ ಘಟನೆ ನಿಲ್ಲುತ್ತಿಲ್ಲ.ಇದೀಗ ನಗರದ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡದಲ್ಲಿ ಹದಿನೈದು ವರ್ಷದ ಬಾಲಕಿ ಮೇಲೆ 6 ಜನರ ಗ್ಯಾಂಗ್ನಿಂದ ಎರಡೆರೆಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿದೆ.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಾದ ಒಂದೇ ದಿನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಎ1 ಸೇರಿ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.
ಆರು ತಿಂಗಳ ಹಿಂದೆ ಸ್ನೇಹಿತ ಬಾಲಕಿಯನ್ನು ಪುಸಲಾಯಿಸಿ ಗುಡ್ಡಕ್ಕೆ ಕರೆದೊಯ್ದು 6 ದುರುಳರಿಂದ ಅತ್ಯಾಚಾರವೆಸಗಲಾಗಿದೆ. ಕೃತ್ಯವೆಸಗುವಾಗ ದುಷ್ಕರ್ಮಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಅದೇ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ಕೂಡ ವಿಡಿಯೋ ಮಾಡಿಕೊಂಡಿದ್ದಾರೆ. ಅದೇ ವಿಡಿಯೋಗಳನ್ನು ಇಟ್ಟುಕೊಂಡು ಇದೀಗ ಮತ್ತೆ ಬಾಲಕಿಗೆ ಬೆದರಿಕೆ ಹಿನ್ನೆಲೆ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






