PM Modi: ಛಾವಾ ಸಿನಿಮಾ ನೋಡಲಿದ್ದಾರೆ ಪ್ರಧಾನಿ ಮೋದಿ: ಜೊತೆಗೆ ಯಾರೆಲ್ಲ ಇರ್ತಾರೆ ಗೊತ್ತಾ..?

ದೇಶದಾದ್ಯಂತ ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಸದ್ದು ಮಾಡುತ್ತಿರುವ, ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಕುರಿತಾದ ಹಿಂದಿ ಚಲನಚಿತ್ರವಾದ ಛಾವಾ ಚಿತ್ರವನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಂಸದರು ವೀಕ್ಷಿಸಲಿದ್ದಾರೆ. ಹೌದು ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜರ ಜೀವನಾಧಾರಿತ `ಛಾವಾ’ ಸಿನಿಮಾವನ್ನು ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿರುವ ಬಾಲಯೋಗಿ ಸಭಾಂಗಣದಲ್ಲಿ ಪ್ರದರ್ಶಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಛಾವಾ ಸಿನಿಮಾದ ವಿಶೇಷ ಪ್ರದರ್ಶನದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ (Amit Shah) ಸೇರಿದಂತೆ ಎಲ್ಲಾ ಕೇಂದ್ರ ಸಚಿವರು ಭಾಗಿಯಾಗುವ ನಿರೀಕ್ಷೆಯಿದೆ. ಜೊತೆಗೆ ಛಾವಾ ಸಿನಿಮಾದಲ್ಲಿ ಸಂಭಾಜಿ ಮಹಾರಾಜರ ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಕ್ಕಿ ಕೌಶಲ್ ಹಾಗೂ ಇಡೀ ಸಿನಿಮಾ ತಂಡವು ಹಾಜರಾಗುವ ನಿರೀಕ್ಷೆಯಿದೆ.
ಇದೇ ಫೆ.14 ರಂದು ಲಕ್ಷ್ಮಣ್ ಉಟೇಕರ್ ನಿರ್ದೇಶನದ ಛಾವಾ ಸಿನಿಮಾ ದೇಶ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಸಿನಿಮಾ ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜರ ಜೀವನವನ್ನು ಆಧರಿಸಿದೆ. ಅವರ ಧೈರ್ಯ ಮತ್ತು ಔರಂಗಜೇಬನಿಂದಾಗಿ ಅನುಭವಿಸಿದ ಹಿಂಸೆಯನ್ನು ವಿವರಿಸುತ್ತದೆ.
ದೇಶ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಈ ಸಿನಿಮಾ ಕುರಿತು ಕಳೆದ ಒಂದು ತಿಂಗಳ ಹಿಂದೆ ದೆಹಲಿಯಲ್ಲಿ ನಡೆದಿದ್ದ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದ ಭಾಷಣದಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






