PM Narendra Modi: ಬಹುನಿರೀಕ್ಷಿತ ಯೆಲ್ಲೋ ಮೆಟ್ರೋ ಮಾರ್ಗ ಉದ್ಘಾಟಿಸಿದ ಮೋದಿ..!

ಆಗಸ್ಟ್ 10, 2025 - 13:24
 0  10
PM Narendra Modi: ಬಹುನಿರೀಕ್ಷಿತ ಯೆಲ್ಲೋ ಮೆಟ್ರೋ ಮಾರ್ಗ ಉದ್ಘಾಟಿಸಿದ ಮೋದಿ..!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಆರ್.ವಿ. ರಸ್ತೆಬೊಮ್ಮಸಂದ್ರ ನಡುವಿನ ಹಳದಿ ಮಾರ್ಗ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದರು. ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟನೆ ನಡೆದಿದ್ದು,

ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್, ಶೋಭಾ ಕರಂದ್ಲಾಜೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಸದರಾದ ಡಾ. ಸಿ.ಎನ್. ಮಂಜುನಾಥ್, ತೇಜಸ್ವಿ ಸೂರ್ಯ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ಉಪಸ್ಥಿತರಿದ್ದರು.

2014ರಲ್ಲಿ ಆರಂಭವಾದ ಕಾಮಗಾರಿ 2021ರಲ್ಲಿ ಪೂರ್ಣಗೊಳ್ಳಬೇಕಿದ್ದರೂ, ಕಾರಣಾಂತರಗಳಿಂದ ವಿಳಂಬವಾಗಿ ಇದೀಗ ಉದ್ಘಾಟನೆ ಕಂಡಿದೆ. ಒಟ್ಟು 7,616 ಕೋಟಿ ರೂ. ವೆಚ್ಚದಲ್ಲಿ ನಿರ್ಮಿತವಾದ ಹಳದಿ ಮಾರ್ಗವು 19.15 ಕಿಮೀ ಉದ್ದವಿದ್ದು, ಆರ್.ವಿ. ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ,

ಬಿಟಿಎಂ ಲೇಔಟ್, ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲು ಗೇಟ್, ಸಿಂಗಸಂದ್ರ, ಹೊಸೂರು ರಸ್ತೆ, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪ ಅಗ್ರಹಾರ, ಹುಸ್ಕೂರು ರಸ್ತೆ, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ ಸೇರಿದಂತೆ ಒಟ್ಟು 16 ನಿಲ್ದಾಣಗಳನ್ನು ಹೊಂದಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow