Post Office Jobs: ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ..! 10th ಪಾಸಾದವರಿಗೆ ಮೊದಲ ಆದ್ಯತೆ

ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಭಾರತೀಯ ಅಂಚೆ ಇಲಾಖೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಭಾರತೀಯ ಅಂಚೆ ಇಲಾಖೆ ಒಟ್ಟು 25 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ನೇಮಕಾತಿಗೆ ಸೇರಲು ಆಫ್ ಲೈನ್ ಮಾದರಿಯಲ್ಲಿ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 8ರ ಶನಿವಾರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕೇಂದ್ರ ವಲಯದಲ್ಲಿ 1, ಎಂಎಂಎಸ್ ಚೆನ್ನೈನಲ್ಲಿ 15, ದಕ್ಷಿಣ ವಲಯದಲ್ಲಿ 4 ಮತ್ತು ಪಶ್ಚಿಮ ವಲಯದಲ್ಲಿ 5 ಹುದ್ದೆಗಳಿವೆ. ಈ ನೇಮಕಾತಿಯಲ್ಲಿ ಭಾಗವಹಿಸಲು, ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಅಭ್ಯರ್ಥಿಯು ಲಘು ಮತ್ತು ಭಾರಿ ಮೋಟಾರು ವಾಹನಗಳ ಮಾನ್ಯ ಚಾಲನಾ ಪರವಾನಗಿ ಮತ್ತು ಕನಿಷ್ಠ ಮೂರು ವರ್ಷಗಳ ಚಾಲನಾ ಅನುಭವವನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು. ಅರ್ಜಿಯ ಕೊನೆಯ ದಿನಾಂಕದಂದು ಅಂದರೆ ಫೆಬ್ರವರಿ 8 ರಂತೆ ವಯಸ್ಸನ್ನು ಲೆಕ್ಕಹಾಕಲಾಗುತ್ತದೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ಕೇಂದ್ರ ವೇತನ ಆಯೋಗದ (ಸಿಪಿಸಿ) ಪ್ರಕಾರ ಲೆವೆಲ್ 2 ವೇತನ ಶ್ರೇಣಿಯಲ್ಲಿ ತಿಂಗಳಿಗೆ 19,900 ರೂಪಾಯಿ ನೀಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನೀಡಲಾಗುವುದು. ಅಭ್ಯರ್ಥಿಗಳು ತಮ್ಮ ಸಂಪೂರ್ಣ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಲ್ಲಿಸಬೇಕಾಗುತ್ತದೆ. ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸೀನಿಯರ್ ಮ್ಯಾನೇಜರ್, ಮೇಲ್ ಮೋಟಾರ್ ಸರ್ವಿಸ್, ನಂ.37, ಗ್ರೀಮ್ಸ್ ರಸ್ತೆ, ಚೆನ್ನೈ - 600006. ಈ ವಿಳಾಸಕ್ಕೆ ಕಳುಹಿಸಿಕೊಡಬೇಕಾಗುತ್ತದೆ. ಅರ್ಜಿ ನಮೂನೆಯನ್ನು ಫೆಬ್ರವರಿ 8 ರೊಳಗೆ ಕಳುಹಿಸಬೇಕು. ಅಭ್ಯರ್ಥಿಯ ಅರ್ಜಿ ಕೊನೆಯ ದಿನಾಂಕದೊಳಗೆ ಸೇರಬೇಕು. ಆನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ
ನಿಮ್ಮ ಪ್ರತಿಕ್ರಿಯೆ ಏನು?






