Power Cut in Bengaluru : ನಾಳಿನ ಕೆಲಸ ಇಂದೇ ಮಾಡಿ: ಬೆಂಗಳೂರು ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು ನಗರದಲ್ಲಿ ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಶನಿವಾರ ಜುಲೈ 26, 2025, ಬೆಳಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ, ಕೆಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅಧಿಕಾರಿಗಳು ಪ್ರಕಟಿಸಿದ್ದಾರೆ. ಈ ವ್ಯತ್ಯಯ 66/11 ಕೆವಿ ಐಐಎಸ್ಸಿ ಉಪಕೇಂದ್ರ ವ್ಯಾಪ್ತಿಗೆ ಸಂಬಂಧಿಸಿದ್ದು, ಬರುವ ಪ್ರದೇಶಗಳು ತಾತ್ಕಾಲಿಕವಾಗಿ ವಿದ್ಯುತ್ ಇಲ್ಲದಂತಾಗಲಿದೆ:
ಎಲ್ಲೆಲ್ಲಿ ಅಂತ ನೋಡಿ.
ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್ ಇ ಎಲ್, ಐಐಎಸ್ ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ ಪೈಪ್ ಲೈನ್ ರಸ್ತೆ, ಎಲ್ ಎನ್ ಕಾಲೋನಿ,ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯ ರಸ್ತೆ, ಎಚ್ .ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇನ್ನು ಶುಕ್ರವಾರದವರೆಗೂ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ತೈಲಗೆರೆ, ಬಿದಲೂರು ಮತ್ತು ಯಲಿಯೂರು ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.ಕೊರಮಂಗಲ ಮತ್ತು ಗೊಬ್ಬರಗುಂಟೆ ಬಳಿಯ ಗ್ರಾಮಗಳು ಸಹ ಪರಿಣಾಮ ಬೀರುತ್ತವೆ.ಕುಂದಣ ಗ್ರಾಮ ಪಂಚಾಯತ್ ಮತ್ತು ಬೆಂಗಳೂರು ಗ್ರಾಮಾಂತರ ಡಿಸಿ ಕಚೇರಿ ಬಳಿ ನಿರ್ವಹಣಾ ಕಾಮಗಾರಿ ನಡೆದಿತ್ತು.
ನಿಮ್ಮ ಪ್ರತಿಕ್ರಿಯೆ ಏನು?