Prabhu Chavan Son Case: ಮದುವೆ ಆಗೋದಾಗಿ ನಂಬಿಸಿ ವಂಚನೆ ಆರೋಪ: ಪ್ರಭು ಚೌಹಾಣ್ ಪುತ್ರನ ವಿರುದ್ಧ ದೂರು

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಯುವತಿಯೊಬ್ಬರು ಗಂಭೀರ ಲೈಂಗಿಕ ಶೋಷಣೆಯ ಆರೋಪವನ್ನು ಹೊರಿಸಿದ್ದಾರೆ. "ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ನಂತರ ಮೋಸ ಮಾಡಲಾಗಿದೆ" ಎಂದು ಆರೋಪಿಸಿರುವ ಮಹಿಳೆ, ಈ ಕುರಿತು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
2023ರ ಡಿಸೆಂಬರ್ 25ರಂದು ನಿಶ್ಚಿತಾರ್ಥ ನಡೆದಿದ್ದು, ಪ್ರತೀಕ್ ಮತ್ತು ಯುವತಿ ನಡುವೆ ಸಂಬಂಧ ಹೆಚ್ಚಾಗಿ, ಮಹಾರಾಷ್ಟ್ರದ ಲಾತೂರಿಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಶೋಷಣೆ ಮಾಡಲಾಗಿದೆ ಎಂಬ ಆರೋಪವಿದೆ. ಮದುವೆಗಾಗಿ ಒತ್ತಾಯ ಮಾಡಿದಾಗ ಪ್ರತೀಕ್ ನಿರಾಕರಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.
"ಪೋಷಕರು ಪ್ರತೀಕ್ ಮನೆಗೆ ಭೇಟಿ ನೀಡಿ ಮಾತನಾಡಿದಾಗ ಗಲಾಟೆ ನಡೆದಿದೆ. ನಮ್ಮನ್ನು ಬಡವರು ಎಂದು ಹೀಯಾಳನೆ ಮಾತುಗಳನ್ನಾಡಿದ್ದಾರೆ" ಎಂದು ಯುವತಿ ಹೇಳಿಕೆ ನೀಡಿದ್ದಾರೆ. ಈ ಕುರಿತು 2025ರ ಜುಲೈ 6ರಂದು ಔರಾದ್ ತಾಲ್ಲೂಕಿನ ಹೋಕ್ರಾಣಾ ಠಾಣೆಗೆ ದೂರು ನೀಡಲು ಪ್ರಯತ್ನಿಸಿದರೂ, ಪೊಲೀಸರು ದೂರು ಸ್ವೀಕರಿಸಿಲ್ಲ ಎಂಬ ಅಸಮಾಧಾನವನ್ನು ಅವರು ವ್ಯಕ್ತಪಡಿಸಿದ್ದಾರೆ.
ಇದರ ಹಿನ್ನೆಲೆಯಲ್ಲಿ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಪ್ರಕರಣ ಇನ್ನಷ್ಟು ಗಂಭೀರ ತಿರುವು ಪಡೆಯುವ ಸಾಧ್ಯತೆ ಇದ್ದು, ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತೆ ಆಗ್ರಹಿಸಿದ್ದಾರೆ.
ಈ ನಡುವೆ, ಹಿಂದಿನ ತಿಂಗಳು ಸಂಬಂಧಿಕರ ಮಧ್ಯೆ ಉಂಟಾದ ಗಲಾಟೆಯ ವಿಡಿಯೋವೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತುಇದೀಗ, ಅದೇ ಪ್ರಕರಣ ಸಂಬಂಧ ನಿಶ್ಚಿತಾರ್ಥ ಮಾಡಿಕೊಂಡು ಮದುವೆ ಮಾಡಿಕೊಳ್ಳದೇ ಮೋಸ ಮಾಡಿದ್ದಕ್ಕೆ ಯುವತಿ, ಭು ಚೌಹಾಣ್ ಮಗ ಪ್ರತೀಕ್ ಚೌಹಾಣ್ ವಿರುದ್ಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






